ಮಹೋತ್ಸವಕ್ಕೆ ಸಿದ್ದೇಶ್ವರ ಸ್ವಾಮೀಜಿಗೆ ಆಹ್ವಾನ
ಶಹಾಬಾದ್: ಗುಲ್ಬರ್ಗ ನಗರದ ರೋಟರಿ ಶಾಲೆಯ ಮೈದಾನದಲ್ಲಿ ಮಾ. 23ರಂದು ನಡೆಯಲಿರುವ ಯೋಗ ಮಹೋತ್ಸವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಧ್ಯಾತ್ಮಿಕ ಪ್ರವಚನ ನೀಡಲು ಬಿಜಾಪುರದ ಜ್ಞಾನ ಯೋಗಾಶ್ರವುದ ಸಿದ್ದೇಶ್ವರ ಸ್ವಾಮಿಗಳಿಗೆ ಮಂಗಳವಾರ ಪತಂಜಲಿ ಯೋಗ ಸಮಿತಿ ಹಾಗೂ ಭಾರತ ಸ್ವಾಭಿಮಾನ ಸಮಿತಿ ವತಿಯಿಂದ ಆಹ್ವಾನ ನೀಡಲಾಯಿತು.
ಭಗತ್ಸಿಂಗ್, ರಾಜಗುರು, ಸುಖದೇವ ಬಲಿದಾನ ದಿವಸದ ನಿಮಿತ್ತ ನಡೆಯಲಿರುವ ಈ ಕಾರ್ಯಕ್ರಮ, ದಕ್ಷಿಣ ಭಾರತದ ಕೇಂದ್ರಿಯ ಪ್ರಭಾರಿ ಆಚಾರ್ಯ ನರೇಂದ್ರಜೀ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಸ್ವಾಭಿಮಾನ ಸಮಿತಿ ಜಿಲ್ಲಾಧ್ಯಕ್ಷ ಶಿವಾನಂದ ಸಾಲಿಮಠ ಹಾಗೂ ಪತಂಜಲಿ ಯೋಗ ಸಮಿತಿ ಜಿಲ್ಲಾಧ್ಯಕ್ಷ ಮಚ್ಛೇಂದ್ರನಾಥ ಮೂಲಗೆ ತಿಳಿಸಿದರು. ಎಲ್ಲಾ ಕಡೆಗಳಲ್ಲಿ ಈ ಕಾರ್ಯಕ್ರಮವನ್ನು ಏಕಕಾಲಕ್ಕೆ ಆಚರಿಸಲಾಗುವುದು. ದೇಶದ 626 ಜಿಲ್ಲೆಗಳಲ್ಲಿ ಒಂದೇ ಸಮಯದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡು ಯೋಗ, ಆಯುರ್ವೇದ ಹಾಗೂ ಆಧ್ಯಾತ್ಮದ ಬಗ್ಗೆ ಜನರಿಗೆ ತಿಳಿಸಿಕೊಡಲಾಗುವುದು. ಸುಮಾರು 10 ಕೋಟಿ ಜನ ಇದರ ಸದುಪಯೋಗ ಪಡೆಯಲಿದ್ದಾರೆ ಎಂದು ಹೇಳಿದರು. ಸಮಿತಿಯ ಮಂಡಳ ಪ್ರಭಾರಿ ಸುನೀಲ ಜಿಂಧೆ, ಭಾರತ ಪತಂಜಲಿ ಯೋಗ ಸಮಿತಿ ಮತ್ತು ಭಾರತ ಸ್ವಾಭಿಮಾನ ಸಮಿತಿ ಕೋಶಾಧ್ಯಕ್ಷ ಲಕ್ಷ್ಮೀ ನಿವಾಸ ತಾಪಡಿಯಾ, ಭಾರತ ಸ್ವಾಭಿಮಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ವೀರೇಶ ಕುಲಕರ್ಣಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

