ಲಿಂಗಸ್ಗೂರು: 1632 ವಿದ್ಯಾರ್ಥಿಗಳ ಹಾಜರು
ಲಿಂಗಸ್ಗೂರು/ಮುದಗಲ್: ತಾಲೂಕಿನಲ್ಲಿ ಪದವಿ ಪೂರ್ವ ಪರೀಕ್ಷೆಗಳು ಆರಂಭಗೊಂಡಿದ್ದು, ಪ್ರಥಮ ದಿನವಾದ ಬುಧವಾರ ಪಾಲಿಟಿಕಲ್ ಸೈನ್ಸ್ ವಿಷಯ ಪರೀಕ್ಷೆಗೆ ಒಟ್ಟು 1632 ವಿದ್ಯಾರ್ಥಿಗಳು ಹಾಜರಾಗುವ ಮೂಲಕ ಪರೀಕ್ಷೆ ಬರೆದರು.
ಲಿಂಗಸ್ಗೂರು ಪಟ್ಟಣದಲ್ಲಿ 3 ಪರೀಕ್ಷಾ ಕೇಂದ್ರಗಳು, ಮುದಗಲ್, ಮಸ್ಕಿ ಮತ್ತು ಹಟ್ಟಿಯಲ್ಲಿ ತಲಾ ಒಂದು ಪರೀಕ್ಷೆ ಕೇಂದ್ರದ ವ್ಯವಸ್ಥೆ ಕಲ್ಪಿಸಲಾಗಿತ್ತು. ಲಿಂಗಸ್ಗೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 201 ನೋಂದಣಿ ಪೈಕಿ 172 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 29 ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ. ಒಳಬಳ್ಳಾರಿ ಚೆನ್ನಬಸವೇಶ್ವರ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ 147 ನೋಂದಣಿ ಪೈಕಿ 137 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 10 ಜನ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಹಾಗೂ ಬಸವೇಶ್ವರ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 242 ನೋಂದಣಿ ಪೈಕಿ 224 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 18 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ತಾಲೂಕಿನ ಮುದಗಲ್ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 433 ನೋಂದಣಿ ಪೈಕಿ 416 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 17 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಹಟ್ಟಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 290 ನೋಂದಣಿ ಪೈಕಿ 281 ವಿದ್ಯಾರ್ಥಿಗಳು ಹಾಜರಾಗಿದ್ದು, 9 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಮಸ್ಕಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 444 ನೋಂದಣಿ ಪೈಕಿ 416 ವಿದ್ಯಾರ್ಥಿಗಳು ಹಾಜರಾಗಿದ್ದು, 28 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರ ಕಚೇರಿಯಿಂದ ತಿಳಿದು ಬಂದಿರುತ್ತದೆ.
ತಾಲೂಕಿನ ಲಿಂಗಸ್ಗೂರು, ಮುದಗಲ್, ಮಸ್ಕಿ ಮತ್ತು ಹಟ್ಟಿ ಸೇರಿದಂತೆ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ 1747 ನೋಂದಣಿ ಪೈಕಿ 1632 ವಿದ್ಯಾರ್ಥಿಗಳು ಹಾಜರಾಗುವ ಮೂಲಕ ಪರೀಕ್ಷೆ ಬರೆದಿದ್ದು, 115 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿರುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

