ರಾಯಚೂರು

ತರಬೇತಿ ಶಿಬಿರದ ಸಮಾರೋಪ

Published On :

ರಾಯಚೂರು: ನೆಹರು ಯುವ ಕೇಂದ್ರ ಮತ್ತು ದೇವಸೂಗೂರಿನ ಸೂಗೂರೇಶ್ವರ ಯುವಕ ಸಂಘದಿಂದ ತಾಲೂಕಿನ ದೇವಸೂಗೂರು ಗ್ರಾಮದಲ್ಲಿ ಇತ್ತೀಚೆಗೆ ರಾಷ್ಟ್ರೀಯ ಯುವ ಪಡೆಯ ಸೇವಾ ಕಾರ್ಯಕರ್ತರ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಆಯೋಜಿಸಲಾಗಿತ್ತು. ದೇವಸೂಗೂರಿನ ಶ್ರೀಸೂಗೂರೇಶ್ವರ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಶಿಬಿರದ ಸಮಾರೋಪ ಸಮಾರಂಭದಲ್ಲಿ ನೆಹರು ಯುವ ಕೇಂದ್ರದ ಲೆಕ್ಕಾಧಿಕಾರಿ ಜಿ.ಎಸ್. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಬಸವರಾಜಪ್ಪ ಮಾತನಾಡಿ, ಯುವಜನತೆ ಸಮಾಜದ ಅಭಿವೃದ್ಧಿಗೆ ಗಮನಹರಿಸಿ ದುಡಿಯುವಂತೆ ಕರೆ ನೀಡಿದರು. ಮುಖ್ಯ ಅತಿಥಿ ಯುನಿಸೆಫ್‌ನ ಮೊಹಮ್ಮದ್ ಶಫಿ ಮಾತನಾಡಿದರು. ಭಾರತ ಸೇವಾದಳದ ಜಿಲ್ಲಾ ಸಂಚಾಲಕ ವಿದ್ಯಾ ಸಾಗರ ಚಿಣಮಗೇರಿ, ಶ್ರೀಸೂಗೂರೇಶ್ವರ ಯುವಕ ಸಂಘದ ಕಾರ್ಯದರ್ಶಿ ಸುರೇಶ್ ಪಾಲ್ಗೊಂಡಿದ್ದರು. ಶಿಬಿರಾರ್ಥಿಗಳು ಹಾಗೂ ಗ್ರಾಮಸ್ಥರು ಮತ್ತು ಯುವಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ವಾರ್ಷಿಕೋತ್ಸವ
ಸಿಂಧನೂರು: ನಗರದ ಪಿಡಬ್ಲ್ಯೂಡಿ ಕ್ಯಾಂಪ್‌ನ ಕಿತ್ತೂರುರಾಣಿ ಚನ್ನಮ್ಮ ವಸತಿ ನಿಯಯದಲ್ಲಿ ವಾರ್ಷಿಕೋತ್ಸವ ಹಾಗೂ 10ನೇ ತರಗತಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಮುಖ್ಯ ಶಿಕ್ಷಕ ಎಸ್.ವಿ. ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳು ಉನ್ನತ ಗುರಿ ಸಾಧನೆಗೆ ಹೆಚ್ಚಿನ ಶ್ರಮ ವಹಿಸಬೇಕು. ಸತತ ಪ್ರಯತ್ನ ಮತ್ತು ಪ್ರಾಮಾಣಿಕ ಯತ್ನ ಯಶಸ್ಸಿನ ದಾರಿಗೆ ಕೊಂಡೊಯ್ಯುವುದರಲ್ಲಿ ಅನುಮಾನವಿಲ್ಲ ಎಂದರು. ಎಸ್.ಎಂ. ಸೊಣಕಿನಾಳ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಮಹತ್ತರ ಸಾಧನೆ ಮಾಡಿದರೆ ಇಡೀ ಸಮಾಜವೇ ತಲೆದೂಗುತ್ತದೆ. ಸಾಧನೆಯೇ ಮನುಷ್ಯನನ್ನು ದೊಡ್ಡ ವ್ಯಕ್ತಿಯನ್ನಾಗಿಸುತ್ತದೆ ಎಂದು ಹೇಳಿದರು. ಸಂಗಜ್ಜ ಬಾರ್ಕಿ ವಾರ್ಷಿಕ ವರದಿ ವಾಚನ ಮಾಡಿದರು. ಶಿಕ್ಷಕಿ ಭಾರತಿ ಪ್ರಾರ್ಥಿಸಿದರು. ಲಾಲಾಸ್ ವಂದಿಸಿದರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.