ಸೌಹಾರ್ದಯುತ ಹೋಳಿಗೆ ಮನವಿ
ಗುಲ್ಬರ್ಗ: ನಗರ ಮತ್ತು ಜಿಲ್ಲಾದ್ಯಂತ ಮಾ.16 ಮತ್ತು 17ರಂದು ಹೋಳಿ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಹೋಳಿ ಹಬ್ಬ ಆಚರಣೆ ನಿಮಿತ್ತ ಕರೆಯಲಾದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೋಳಿ ಹಬ್ಬ ಆಚರಣೆಯ ಸಂದರ್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸಲು ಅವಕಾಶ ನೀಡದಂತೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದರು.
ಸೂಕ್ತ ಕ್ರಮ: ಹಬ್ಬದ ದಿನಗಳಂದು ಎಲ್ಲ ಸಾರ್ವಜನಿಕರು ನೈಸರ್ಗಿಕ ಬಣ್ಣ ಬಳಕೆ ಮಾಡಬೇಕು. ರಾಸಾಯನಿಕ ಬಣ್ಣ ಮಾರಾಟ ನಿಷೇಧ ಕುರಿತು ನಿಷೇಧಿಸಲು ಹಾಗೂ ಕಾಲೇಜು ವಿದ್ಯಾರ್ಥಿಗಳು ಬಣ್ಣವನ್ನು ಒತ್ತಾಯವಾಗಿ ಹಾಕದಂತೆ, ಬೈಕ್ಗಳ ಸೈಲೆನ್ಸರ್ ತೆಗೆದು ಓಡಿಸದಂತೆ ಸೂಚಿಸಲು ಕ್ರಮ ಜರುಗಿಸಲಾಗುವುದು.
ಮನೆ ಮನೆ ಕಸ ಸಂಗ್ರಹಣಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲಾಗುವುದು. ಭಾನುವಾರ ಮತ್ತು ಸೋಮವಾರ ಸಾರ್ವಜನಿಕರಿಗೆ ಸಮರ್ಪಕ ಕುಡಿವ ನೀರಿನ ವ್ಯವಸ್ಥೆ ಮಾಡಲು ನೀರು ಸರಬರಾಜು ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.
ಈ ದಿನಗಳಂದು ಅಕ್ರಮವಾಗಿ ಮದ್ಯ ಮಾರಾಟವಾಗುವುದನ್ನು ನಿರ್ಬಂಧಿಸಲು ಅಬಕಾರಿ ಇಲಾಖೆ ವಿಶೇಷ ಗಮನ ಹರಿಸಬೇಕು. ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಕಿಡಿಗೇಡಿಗಳನ್ನು ನಿರ್ಬಂಧಿಸಲು ಕ್ರಮ ಜರುಗಿಸಲಾಗುವುದು. ಅಲ್ಲದೆ ಯಾವುದೇ ಅಹಿತರ ಘಟನೆ ಸಂಭವಿಸದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು ಎಂದರು.
ಸಭೆಯಲ್ಲಿ ಸಮಿತಿ ಸದಸ್ಯ ಹಾಗೂ ನಾಗರಿಕರಾದ ಬಾಬುರಾವ ಜಹಾಗಿರದಾರ, ಅಪ್ಪಾರಾವ ಅಕ್ಕೋಣಿ, ಅನಿಲ ದೇಶಪಾಂಡೆ, ಸುಭಾಷ್ ನರೋಣಾ, ವಿವಿಧ ಧರ್ಮಗಳ ಮುಖಂಡರು, ಹಿರಿಯ ನಾಗರಿಕರು ಸೂಕ್ತ ಸಲಹೆಗಳನ್ನು ನೀಡಿದರು. ಪೊಲೀಸ್ ಡಿವೈಎಸ್ಪಿ ಎ.ಎಸ್. ನಾಯಕ್ ಹೋಳಿಹಬ್ಬ ಆಚರಣೆ ಸಂದರ್ಭದಲ್ಲಿ ಕೈಗೊಳ್ಳಲಾಗುವ ಪೊಲೀಸ್ ಬಂದೋಬಸ್ತ್ ಕುರಿತು ವಿವರಿಸಿದರು.
ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

