ರಾಯಚೂರು

ಸರ್ಕಾರದ ವಿರುದ್ಧ ಕಪ್ಪು ಬಾವುಟ ಪ್ರದರ್ಶನ

Published On :

ಯಾದಗಿರಿ: ರಾಜ್ಯದ ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಪಟ್ಟಿಯಲ್ಲಿ ಇತರೇ ಹಿಂದುಳಿದ ಜಾತಿಗಳನ್ನು ಸೇರ್ಪಡೆ ಮಾಡಲು ಹೊರಟಿರುವ ಸರ್ಕಾರ ಕ್ರಮವನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ದಲಿತ ಸಂಘರ್ಷ ಸಮಿತಿ ವತಿಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.
ಮಂಡಲ್ ಆಯೋಗ, ವೆಂಕಟಸ್ವಾಮಿ, ಚಿನ್ನಪ್ಪ ರೆಡ್ಡಿ ಅಯೋಗಳು ಹಿಂದುಳಿದ ವರ್ಗಗಳೆಂದು ಗುರುತಿಸಲ್ಪಟ್ಟ ಜಾತಿಗಳನ್ನೇ ಮತ್ತೆ ಪರಿಶಿಷ್ಟ ಮೀಸಲಾತಿ ಪಟ್ಟಿಗೆ ಸೇರಿಸುವುದನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೈಬೀಡಬೆಕು. ದಲಿತರ ಮೇಲಿನ ಹಲ್ಲೆ ಅಥವಾ ದೌರ್ಜನ್ಯ ನಡೆದರೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದು ಸಮಿತಿ ಜಿಲ್ಲಾ ಸಂಚಾಲಕ ಶರಣು ನಾಟೇಕಾರ ಆಗ್ರಹಿಸಿದ್ದಾರೆ.   ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ದಲಿತ ಮೇಲೆ ಹಲ್ಲೆ, ಕೊಲೆ, ದೌರ್ಜನ್ಯ, ಅತ್ಯಾಚಾರ, ಸಾಮಾಜಿಕ ಬಹಿಷ್ಕಾರಗಳು ನಡೆಯುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ವಿರುಪಾಕ್ಷ ಕರಡಕಲ್, ಶರಣಪ್ಪ ಅರಕೇರಾ, ಭೀಮರಾಯ ಕರಣಗಿ, ಈರಣ್ಣ ಕ್ರಾಂತಿ, ಡಿ.ಎಸ್. ಕುಮಾರ, ಬಾಲಪ್ಪ ಗಿರೆಪ್ಪನೂರ್, ಮಲ್ಲಿಕಾರ್ಜುನ ಕೊಡಲಗಿಕರ್, ಮಲ್ಲಿಕಾರ್ಜುನ ಮೋಟ್ನಳ್ಳಿ, ರಂಗನಾಥ ಚಾಮನಳ್ಳಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.