ದೇಶಕ್ಕಾಗಿ ತ್ಯಾಗದ ಮನೋಭಾವ ಬೆಳೆಸಿಕೊಳ್ಳಿ
ಮಸ್ಕಿ: ದೇಶಕ್ಕಾಗಿ ತ್ಯಾಗಮಾಡುವ ಮನೋಭಾವ ಬೆಳೆಸಿಕೊಳ್ಳುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತೀಯ ಕಾರ್ಯಕಾರಣಿ ಸದಸ್ಯ ರಾಜಶೇಖರ ಮನವಿ ಮಾಡಿದರು.
ಅವರು ಪಟ್ಟಣದ ಕವಿತಾಳ ರಸ್ತೆಯ ಹತ್ತಿರ ನಡೆದ ಬಿಜೆಪಿಯ ಕಾರ್ಯಾಗಾರದಲ್ಲಿ ಶುಕ್ರವಾರ ಮಾತನಾಡಿ, ದೇಶದ ನೈಸರ್ಗಿಕವಾಗಿ ಸಂಪತ್ಭರಿತವಾಗಿದೆ. ನದಿ ಜೋಡಣೆ ಮಾಡುವುದು ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸಾಗಿತ್ತು ಎಂದರು.
ಸ್ವಾತಂತ್ರ್ಯ ನಂತರ ಕಾಂಗ್ರೆಸ್ ವಿಸರ್ಜಿಸಬೇಕೆಂಬುದು ಗಾಂಧೀಜಿಯವರ ಕನಸಾಗಿತ್ತು. ಅದನ್ನೇ ಈಗ ಬಿಜೆಪಿ ಪ್ರಧಾನಿ ಆಭ್ಯರ್ಥಿ ನರೇಂದ್ರ ಮೋದಿ ಅವರು ಕೂಡಾ ಹೇಳುತ್ತಿದ್ದಾರೆ. ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಎಲ್ಲೆಡೆ ನರೇಂದ್ರ ಮೋದಿ ಅವರ ಅಲೆಯಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಕ್ರಿಯಾಶೀಲರಾಗಬೇಕಿದೆ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಚಿತ್ತಾಪೂರ, ಮಸ್ಕಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಂಗಮೇಶ, ಜಿಲ್ಲಾ ಉಪಾಧ್ಯಕ್ಷ ಶಂಕರ ಮೇದಾರ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹನುಮೇಶ ನಾಯಕ ಬಳಗಾನೂರ ಮಾತನಾಡಿದರು.
ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಬಸವರಾಜ ಪರಾಪೂರ, ಪ್ರಾಣೇಶ ವಕೀಲರು, ಶಿವಪುತ್ರಪ್ಪ ಅರಳಹಳ್ಳಿ, ರಮೇಶ ಉದ್ಬಾಳ, ಗುರುಭೀಮರಾವ್ ಕುಲಕರ್ಣಿ, ತಾಪಂ ಸದಸ್ಯ ಅಮರೇಶ ಕಾಚಾಪೂರ, ಮಹಿಳಾ ಮೋರ್ಚಾ ಅಧ್ಯಕ್ಷೆ ಪದ್ಮಾವತಿ ಬಳಗಾನೂರ ಮೊದಲಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

