ರಾಯಚೂರು

ಭ್ರಷ್ಟಾಚಾರದಲ್ಲಿ ಮುಳುಗಿದ ಕಾಂಗ್ರೆಸ್; ಆರೋಪ

Published On :

ಸಿಂಧನೂರು: ಕಳೆದ ಹತ್ತು ವರ್ಷಗಳಿಂದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಆರೋಪಿಸಿದರು.
ನಗರದ ಕನಕದಾಸ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬಿಜೆಪಿ ತಾಲೂಕು ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್‌ಗೆ ಈ ಬಾರಿ ಮತದಾರರು ತಕ್ಕ ಪಾಠ ಕಲಿಸಬೇಕು. ಗುಜರಾತನ್ನು ಅಭಿವೃದ್ಧಿ ಪಥಕ್ಕೆ ಕೊಂಡೊಯ್ದು ಹಾಟ್ರಿಕ್ ಸಾಧನೆ ಮಾಡಿರುವ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುವಂತೆ ಅವರು ಮನವಿ ಮಾಡಿದರು.
ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಚುನಾವಣೆ ಕಾವು ಎಲ್ಲೆಡೆ ಹೆಚ್ಚುತ್ತಲಿದೆ. ಮೋದಿ ಅಲೆ ಯುವಕರಲ್ಲಿ ಹೊಸ ಶಕ್ತಿ ತುಂಬಿದೆ. ಕಾಂಗ್ರೆಸ್ ದುರಾಡಳಿತ ಜನರಿಗೆ ಬೇಸರ ತಂದಿದೆ. ಈಗ ಎಲ್ಲೆಲ್ಲೂ ಕಮಲದ ಅಲೆ ಇದೆ. ಮೋದಿ ಯುವಕರ ಆಶಾಕಿರಣವಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಅವರನ್ನು ಗೆಲ್ಲಿಸಿ ಈ ಭಾಗದ ಹೋರಾಟಗಾರರಿಗೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು.
ಸಭೆಯನ್ನು ಉದ್ದೇಶಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ, ಎಂಎಲ್ಸಿ ಹಾಲಪ್ಪಾಚಾರ್, ಮಾಜಿ ಶಾಸಕ ಪರಣ್ಣಮುನವಳ್ಳಿ, ರಾಜಶೇಖರ ಪಾಟೀಲ್, ಮಹಾದೇವಪ್ಪ ಮಸ್ಕಿ, ಗಿರಿಗೌಡ ಮಾತನಾಡಿದರು.
ಸಭೆಯಲ್ಲಿ ಪಕ್ಷದ ಮುಖಂಡರಾದ ಅಮರೇಗೌಡ ವಿರೂಪಾಪುರ, ಕೊಲ್ಲಾ ಶೇಷಗಿರಿರಾವ್, ದೇವೇಂದ್ರಪ್ಪ ನಾಯಕ, ಮಧ್ವರಾಜ ಆಚಾರ್ಯ, ಎಂ.ದೊಡ್ಡಬಸವರಾಜ, ರಾಮರಾವ್ ಕುಲಕರ್ಣಿ, ಕೆ.ಮರಿಯಪ್ಪ, ವೆಂಕಣ್ಣ ಜೋಷಿ, ನಾಗಪ್ಪ, ಲಿಂಗರಾಜ ಹೂಗಾರ, ಜಗದೀಶ, ಸಿದ್ರಾಮೇಶ, ಮಮತಾ ಹಿರೇಮಠ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.