ಡೋಣಗಾಂವ ಶಿಕ್ಷಕರ ಕೊರತೆ: ಪಾಲಕರ ಆಂತಕ
ಚಿತ್ತಾಪುರ: ತಾಲೂಕಿನ ಡೋಣಗಾಂವ ಗ್ರಾಮದ ಸ.ಹಿ.ಪ್ರಾ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ಮಕ್ಕಳ ವಿದ್ಯಾಭ್ಯಾಸದ ಮೇಲೆ ಗಂಭೀರ ಪರಿಣಾಮ ಬಿರುತ್ತಿದೆ ಎಂದು ಗ್ರಾಮದ ಮರಿಯಪ್ಪ ಬಾಯಿನ್ ಹಾಗೂ ಪಾಲಕರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಶಾಲೆಯಲ್ಲಿ 1 ರಿಂದ 7ನೇ ತರಗತಿವರೆಗೆ ಶಾಲೆ ಇದ್ದು, ಒಟ್ಟು 391 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಗುಣವಾಗಿ ಶಿಕ್ಷಕರು ಇಲ್ಲದೆ ಇರುವುದರಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತಗೊಳ್ಳುತ್ತಿದೆ. ಇಲ್ಲಿ ಒಟ್ಟು 12 ಹುದ್ದೆಗಳಲ್ಲಿ 6ಜನ ಶಿಕ್ಷಕರು ಮಾತ್ರ ಇದ್ದು, ಇನ್ನು 4 ಸಾಮಾನ್ಯ ಕನ್ನಡ ಶಿಕ್ಷಕರ ಹಾಗೂ 2 ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಇಲ್ಲಿ ವಿದ್ಯಾಭ್ಯಾಸದ ಜೊತೆ ಕ್ರೀಡಾ ಚಟುವಟಿಕೆಯಲ್ಲಿ ತೀರ ಹಿಂದುಳಿದಿದೆ ಎಂದು ಪಾಲಕರು ಆಂತಕ ವ್ಯಕ್ತಪಡಿಸುತ್ತಾರೆ. ಈ ಬಗ್ಗೆ ಇಲ್ಲಿ ಅನೇಕ ಪಾಲಕರು ಎಸ್‌ಡಿಎಂಸಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಲವಾರು ಮನವಿ ಪತ್ರಗಳನ್ನು ಸಲ್ಲಿಸಿದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪಾಲಕರು ದೂರುತ್ತಾರೆ.
ಮುಂದಿನ ದಿನಗಳಲ್ಲಿ ಈ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಇಲ್ಲಿ ಒಳ್ಳೆ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ವಿಳಂಬ ನೀತಿ ಅನುಸರಿಸಿದಲ್ಲಿ ಇದರ ವಿರುದ್ಧ ಶಾಲೆ ಬೀಗ ಮುದ್ರೆ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಪಾಲಕರು ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

