ರಾಯಚೂರು

ಪುನರ್ ಪರಿಶೀಲಿಸಿ

Published On :

ಲಿಂಗಸ್ಗೂರು: ಅಕಾಲಿಕ ಆಲಿಕಲ್ಲು ಮಳೆಗೆ ರೈತರ ಬೆಳೆಗಳು ಹಾನಿಗೀಡಾಗಿದ್ದು, ಅಧಿಕಾರಿಗಳು ಪುನರ್ ಪರಿಶೀಲನೆ ನಡೆಸಿ ಸಮಗ್ರ ವರದಿ ತಯಾರಿಸಿ ಪರಿಹಾರ ಒದಗಿಸಲು ಸರ್ಕಾರಕ್ಕೆ ಕಳುಹಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ಆದರೆ ಕೃಷಿ, ಕಂದಾಯ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕೇವಲ ಲಿಂಗಸ್ಗೂರು ತಾಲೂಕಿನಲ್ಲಿ ಮಾತ್ರ ಸುರಿದಿದೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದೆ. ತೋಟಗಾರಿಕೆ ಬೆಳೆ 5 ತಾಲೂಕುಗಳಲ್ಲಿ ಸಂಪೂರ್ಣ ನೆಲಕಚ್ಚಿವೆ. ಬರುವ ಲೋಕಸಭಾ ಚುನಾವಣೆ ನೆಪದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ಪುನರ್ ಪರಿಶೀಲನೆ ನಡೆಸಬೇಕು. ಇಲ್ಲದಿದ್ದರೆ ರೈತ ಸಂಘದಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.