ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ 204 ಮತಗಟ್ಟೆಗಳ ಸ್ಥಾಪನೆ
ಲಿಂಗಸ್ಗೂರು: ಸ್ಥಳೀಯ ತಹಸೀಲ್ದಾರ್ ಕಚೇರಿಯಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಸಹಾಯಕ ರಿಟರ್ನಿಂಗ್ ಅಧಿಕಾರಿ ಎಸ್.ಆರ್. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಲೋಕಸಭಾ ಚುನಾವಣೆ ನಿಮಿತ್ತ ನಿಯೋಜಿತ ಅಧಿಕಾರಿಗಳ ಸಭೆ ಸೋಮವಾರ ಜರುಗಿತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಆರ್. ಕುಮಾರಸ್ವಾಮಿ, ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 204 ಮತಗಟ್ಟೆಗಳಿದ್ದು, ಒಟ್ಟು 1,68,574 ಮತದಾರರಲ್ಲಿ 84,465 ಪುರುಷ ಮತ್ತು 84,097 ಮಹಿಳಾ ಹಾಗೂ ಇತರೆ 12 ಮತದಾರರಿರುತ್ತಾರೆ. ಇತ್ತೀಚಿಗೆ ಮತದಾರ ಸೌಲಭ್ಯ ಕೇಂದ್ರ ತೆರೆಯಲಾಗಿದ್ದು, ಇದರಲ್ಲಿ ಹೊಸ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ವರದಿ ಆಧರಿಸಿ ಮತದಾರರ ಅಧಿಕೃತ ಮಾಹಿತಿ ದೊರಯಲಿದೆ ಎಂದರು.
ಚುನಾವಣೆ ನಿಮಿತ್ತ 3 ಜನ ಅಧಿಕಾರಿಗಳ ಫ್ಲೈಯಿಂಗ್ ಸ್ಕ್ವಾಡ್ ತಂಡ ರಚಿಸಲಾಗಿದ್ದು, 15 ಜನ ಅಧಿಕಾರಿಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ತಂಡ ರಚಿಸಲಾಗಿದೆ. ಸಾರ್ವಜನಿಕರಲ್ಲಿ ಚುನಾವಣೆ ನಿಯಮ ಹಾಗೂ ಮತದಾನ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಅವರಿಂದ ನೀತಿಸಂಹಿತೆ ಉಲ್ಲಂಘನೆ ಕುರಿತು ದೂರುಗಳು ಬಂದರೆ ಕ್ರಮ ಜರುಗಿಸುವ ಕುರಿತಾಗಿ ಸಭೆಯಲ್ಲಿ ಸೂಚಿಸಲಾಯಿತೆಂದು ತಿಳಿಸಿದರು. ಈ ವೇಳೆ ಉಪತಹಸೀಲ್ದಾರ್ ಖಾಜಾಹುಸೇನ್ ಇದ್ದರು.
ಇಂದು 'ಕೈ' ಕಾರ್ಯಕರ್ತರ ಸಭೆ
ಚಿತ್ತಾಪುರ: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಪ್ರಯುಕ್ತ ಚಿತ್ತಾಪುರ ವಿಧಾನಸಭೆ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯು ಪಟ್ಟಣದ ವಿಶ್ವಜ್ಯೋತಿ ಕಲ್ಯಾಣ ಮಂಟಪದಲ್ಲಿ ಮಾ.18 ರಂದು ಮಂಗಳವಾರ ಸಂಜೆ 4ಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಜರುಗಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುತ್ತಿದ್ದು, ಅವರ ಚುನಾವಣೆ ಪೂರ್ವಭಾಗಿಯಾಗಿ ಸಿದ್ಧತೆ ನಡೆಸಲು ಮತಕ್ಷೇತ್ರದ ಜಿಪಂ, ತಾಪಂ, ಗ್ರಾಪಂ, ಪುರಸಭೆ ಹಾಗೂ ಇತರೆ ಚುನಾಯಿತ ಪ್ರತಿನಿಧಿಗಳು ಹಾಗೂ ಪಕ್ಷದ ಹಿತೈಷಿಗಳು, ಪಕ್ಷದ ಕಾರ್ಯಕರ್ತರ ಸಭೆ ಕರೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

