ಮತದಾರರ ಜಾಗೃತಿ ಸಮಿತಿ ಸಭೆ
ರಾಯಚೂರು: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಸಂಜೆ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರ ಜಾಗೃತಿ ಸಮಿತಿ (ಸ್ವೀಪ್)ಯ ಅಧಿಕಾರಿಗಳ ಮಟ್ಟದ ಸಭೆ ನಡೆಯಿತು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಸ್.ಎನ್. ನಾಗರಾಜು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲರೂ ಈ ಬಾರಿಯ ಚುನಾವಣೆಯಲ್ಲಿ ಮತದಾನಕ್ಕೆ ಮತಗಟ್ಟೆಗಳಿಗೆ ಆಸಕ್ತಿಯಿಂದ ಧಾವಿಸುವಂತೆ ಮತದಾರರ ಮನವೊಲಿಕೆ ಕಾರ್ಯ ಮಾಡುವಂತೆ ಸೂಚಿಸಿದರು.
ಪ್ರೇರೇಪಿಸಬೇಕು: ಮತದಾನ ಪವಿತ್ರ ಕರ್ತವ್ಯವೆಂದು ಮತದಾರರು ಭಾವಿಸುವಂತೆ ಪ್ರೇರೇಪಿಸಬೇಕು. ಮತದಾರರು ತಮ್ಮ ಮತವನ್ನು ಚಲಾಯಿಸುವುದನ್ನು ತಪ್ಪಿಸಿಕೊಳ್ಳದಂತೆ ಅವರಲ್ಲಿ ಜಾಗೃತಿ ಮೂಡಿಸಿ ಪೂರ್ಣ ಪ್ರಮಾಣದ ಮತದಾನ ಸಾಧ್ಯವಾಗಿಸುವಲ್ಲಿ ಶ್ರಮಿಸುವಂತೆ ಕರೆ ನೀಡಿದರು.
ಸ್ವೀಪ್ ಸಮಿತಿಯ ಪಾತ್ರ ಅಮೂಲ್ಯ:ಬೀದಿ ನಾಟಕಗಳ ಮೂಲಕ ಹಾಗೂ ಶಾಲೆಗಳಲ್ಲಿ ಸಹ ಮತದಾನದ ಮಹತ್ವದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಮೂಲಕ ಮಕ್ಕಳು ತಮ್ಮ ಪಾಲಕರನ್ನು ಮತಗಟ್ಟೆಗಳಿಗೆ ಕಳಿಸುವಂತೆ ಮಾಡುವಲ್ಲಿ ಸ್ವೀಪ್ ಸಮಿತಿಯ ಪಾತ್ರ ಅಮೂಲ್ಯವಾದದ್ದು ಎಂದು ಹೇಳಿದರು.
ರ್ಯಾಲಿ, ರಂಗೋಲಿ ಸ್ಪರ್ಧೆ, ಪೇಂಟಿಂಗ್ ಸ್ಪರ್ಧೆ:ವಿವಿಧ ಸಂಘ ಸಂಸ್ಥೆಗಳು ಮತದಾನದ ಅರಿವು ಮೂಡಿಸುವಂತಹ ಕಾರ್ಯಕ್ರಮಗಳಾದ ಮೋಟಾರ್ ವಾಹನಗಳ ರ್ಯಾಲಿ ಮತ್ತು ಹೆಣ್ಣು ಮಕ್ಕಳಿಗಾಗಿ ರಂಗೋಲಿ ಸ್ಪರ್ಧೆ, ಪೇಂಟಿಂಗ್ ಸ್ಪರ್ಧೆ ಏರ್ಪಡಿಸುವತ್ತ ಗಮನಹರಿಸಬೇಕು. ಶಾಲೆ ಕಾಲೇಜುಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕೆಂದು ಸಲಹೆ ನೀಡಿದರು.
ಸಭೆಯಲ್ಲಿ ಅಪರ ಡಿಸಿ ಉಮೇಶ, ಸಹಾಯಕ ಆಯುಕ್ತ ಮಾರುತಿ, ಮುಕ್ಕಣ್ಣ ಕರಿಗಾರ, ರಾಮಾಂಜನೇಯ, ಸಾರಿಗೆ ಅಧಿಕಾರಿ ಸಿದ್ದಲಿಂಗಯ್ಯ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

