ರಾಯಚೂರು ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ
ಲಿಂಗಸ್ಗೂರು: ರಾಯಚೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು, ಪಕ್ಷದ ಅಭ್ಯರ್ಥಿ ಗೆಲವು ಖಚಿತ ಎಂದು ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಕಾಂಗ್ರೆಸ್ ಹಿರಿಯ ಮುಖಂಡ ಲಾಲ್‌ಅಹ್ಮದ್ ಸಾಬ್ ನಿವಾಸದಲ್ಲಿ ಮುಖಂಡರನ್ನು ಭೇಟಿ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ಹೈಕಮಾಂಡ್ ಬಿ.ವಿ. ನಾಯಕರನ್ನು ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರು ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಪ್ರಚಾರ ಕಾರ್ಯ ಕೈಗೊಳ್ಳಲು ಯೋಜನೆ ರೂಪಿಸಲು ಜಿಲ್ಲೆಯಲ್ಲಿ ಪ್ರವಾಸ ಕಾರ್ಯ ಕೈಗೊಂಡಿರುವುದಾಗಿ ತಿಳಿಸಿದರು. ಕೇಂದ್ರ, ರಾಜ್ಯ ಸರ್ಕಾರಗಳ ಅಭಿವೃದ್ಧಿ ಯೋಜನೆಗಳು ಪಕ್ಷದ ಅಭ್ಯರ್ಥಿಗಳ ಗೆಲವಿಗೆ ಸಹಕಾರಿಯಾಗಲಿವೆ. ಈ ಬಾರಿಯೂ ಮತದಾರರ ಒಲವು ಪಕ್ಷದ ಪರವಾಗಿದ್ದು, ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನಗಳು ಗೆಲ್ಲುವ ವಿಶ್ವಾಸವಿದೆ. ಟಿಕೆಟ್ ಹಂಚಿಕೆಯಲ್ಲಿ ಎಲ್ಲ ಪಕ್ಷದಲ್ಲಿ ಗೊಂದಲ ಸಾಮಾನ್ಯ. ಅದರಂತೆ ಕಾಂಗ್ರೆಸ್‌ನಲ್ಲಿಯೂ ಸ್ವಾಭಾವಿಕ. ಆದರೆ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು. ಈ ವೇಳೆ ಮಾಜಿ ಸಚಿವ ಅಮರೇಗೌಡ ಪಾಟೀಲ್, ಡಿ.ಎಸ್. ಹೂಲಗೇರಿ, ಲಾಲ್‌ಅಹ್ಮದ್ ಸಾಬ್, ಭೂಪನಗೌಡ ಕರಡಕಲ್, ಖಾದರಪಾಶಾ, ಕುಮಾರಸ್ವಾಮಿ, ಮಲ್ಲಣ್ಣ ವಾರದ, ಗುಂಡಪ್ಪ ನಾಯಕ, ಎಂ.ಡಿ. ರಫೀ, ಶರಣಗೌಡ ಪಾಟೀಲ್, ಚನ್ನಾರಡ್ಡಿ, ಅನೀಸ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

