ಇಂದು ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ
ರಾಯಚೂರು: ನಗರದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ಮಾ. 21ರಂದು ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಸಂಜೆ 5ಕ್ಕೆ ನಗರದ ಐಎಂಎ ಹಾಲ್ನಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಉದ್ಘಾಟಿಸಲಿದ್ದಾರೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ಪ್ರಕಾಶ ಕುಮಾರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಸಿಇಒ ವಿಜಯ ಜ್ಯೋತ್ಸ್ನಾ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಸದಸ್ಯರಾದ ಗುರುರಾಜ್, ಪ್ರತಿಭಾ ರಾಣಿ ಪಾಲ್ಗೊಳ್ಳುವರು.
ಆಟೋದಿಂದ ಬಿದ್ದು ವ್ಯಕ್ತಿ ಸಾವು
ರಾಯಚೂರು: ನಗರದ ಶಶಿಮಹಲ್ ವೃತ್ತದ ಬಳಿ ಆಟೋದಲ್ಲಿದ್ದ ವ್ಯಕ್ತಿಯೊಬ್ಬ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಮೃತನನ್ನು ನರಸಿಂಹಲು ಎಂದು ಗುರುತಿಸಲಾಗಿದೆ. ಈತ ಆಟೋದ ಹಿಂಭಾಗದಲ್ಲಿ ಕುಳಿತು ಸಾಗುತ್ತಿದ್ದ ವೇಳೆ ಆಟೋ ವೇಗವಾಗಿ ಸಾಗಿದ್ದರಿಂದ ನರಸಿಂಹಲು ಆಯತಪ್ಪಿ ಕೆಳಗೆ ಬಿದ್ದಿದ್ದು ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ನಗರದ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಯರೋಗ ದಿನ
ರಾಯಚೂರು: ನಗರದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮವನ್ನು ಮಾ.24ರಂದು ಆಯೋಜಿಸಲಾಗಿದೆ. ಅಂದು ಬೆಳಗ್ಗೆ 8 ಗಂಟೆಗೆ ಜಾಗೃತಿ ಜಾಥಾ ಆಯೋಜಿಸಲಾಗಿದ್ದು, ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಅವರು ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ಜಿಪಂ ಸಿಇಒ ವಿಜಯಜೋತ್ಸ್ನಾ ಪಾಲ್ಗೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

