ಮಾದರಿ ಜಿಲ್ಲೆಯಾಗಿಸಲು ಬಿಜೆಪಿ ಗೆಲ್ಲಿಸಿ'
ಕ.ಪ್ರ. ವಾರ್ತೆ ಲಿಂಗಸ್ಗೂರು ಮಾ.20
ಜಿಲ್ಲೆಯಿಂದ ಆಯ್ಕೆಯಾದ ಸಂಸದರು ಕಳೆದ ಹಲವು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಗಮನ ಹರಿಸದೆ ಕಾಲಹರಣ ಮಾಡಿದ್ದು, ರಾಜ್ಯದಲ್ಲಿ ರಾಯಚೂರು ಮಾದರಿ ಜಿಲ್ಲೆಯಾಗಿಸಲು ಈ ಬಾರಿ ಬಿಜೆಪಿಯನ್ನು ಗೆಲ್ಲಿಸಲು ಶ್ರಮಿಸಬೇಕೆಂದು ರಾಯಚೂರು ಕ್ಷೇತ್ರದ ಬಿಜೆಪಿ ನಿಯೋಜಿತ ಅಭ್ಯರ್ಥಿ ಕೆ.ಶಿವನಗೌಡ ನಾಯಕ ಮನವಿ ಮಾಡಿದರು.
ತಾಲೂಕಿನ ಆನಾಹೊಸೂರು ಗ್ರಾಮದಲ್ಲಿ ಗುರುವಾರ ಬಿಜೆಪಿ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಆನಾಹೊಸೂರು ಮತ್ತು ಗುರುಗುಂಟಾ ಜಿಪಂ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ರಾಯಚೂರು ಲೋಕಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಸಂಸದರಾಗಿ ಆಯ್ಕೆಗೊಂಡವರಿಂದ ಅಭಿವೃದ್ಧಿ ಶೂನ್ಯವಾಗಿದ್ದು, ಕಳೆದ ಬಾರಿ ದೇವದುರ್ಗ ಶಾಸಕನಾಗಿದ್ದ ಸಮಯದಲ್ಲಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರು. ಅನುದಾನದಲ್ಲಿ ಬಡವರಿಗೆ 55 ಸಾವಿರ ಮನೆಗಳನ್ನು ಒದಗಿಸಲಾಗಿದೆ ಎಂದರು.
ಭರವಸೆ ನೀಡಲೂ ಸಿಎಂಗೆ ಸ್ವಾತಂತ್ರವಿಲ್ಲ: ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಅಭಿವೃದ್ಧಿ ಭರವಸೆ ನೀಡಲೂ ಸ್ವಾತಂತ್ರ್ಯ ಇಲ್ಲದಾಗಿದ್ದು, ಬಸವಸಾಗರ ಜಲಾಶಯದಲ್ಲಿ ಸಾಕಷ್ಟು ನೀರು ಇದ್ದರೂ ಕಾಲುವೆಗಳಿಗೆ ನೀರು ಹರಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಇದರಿಂದ ಬೆಳೆಗಳು ಒಣಗುತ್ತಿದ್ದು, ರೈತರ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಅಲ್ಲದೆ, ದೇಶದ ಭದ್ರತೆಗೆ ನರೇಂದ್ರ ಮೋದಿ ಪ್ರಧಾನಿಯಾಗುವುದು ಅನಿವಾರ್ಯವಾಗಿದ್ದು, ದೇಶಾದ್ಯಂತ ಮೋದಿ ಬಗ್ಗೆ ಜನತೆ ಒಲವು ತೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಬಿಜೆಪಿ ಗೆಲವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ಈ ವೇಳೆ ಮಾಜಿ ಶಾಸಕ ದೊಡ್ಡನಗೌಡ ಲೆಕ್ಕಿಹಾಳ, ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್, ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್, ತಾಲೂಕಾಧ್ಯಕ್ಷ ಸಿದ್ಧನಗೌಡ ಪೊಲೀಸ್‌ಪಾಟೀಲ್, ಮುಖಂಡರಾದ ಸಿದ್ಧು ಬಂಡಿ, ಟಿ.ಆರ್. ನಾಯಕ, ಜೀವಲೆಪ್ಪ ನಾಯಕ, ಮಲ್ಲಪ್ಪ ಅಂಕುಶದೊಡ್ಡಿ, ಶರಣಯ್ಯ ಗೊರೇಬಾಳ ಸೇರಿದಂತೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

