ಸುಗ್ಗಿ-ಹುಗ್ಗಿ ಗ್ರಾಮೀಣ ಸಾಂಸ್ಕೃತಿಕ ಉತ್ಸವ 23ಕ್ಕೆ
ರಾಯಚೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದಲ್ಲಿ ಮಾ. 23ರಂದು ಸುಗ್ಗಿ-ಹುಗ್ಗಿ ಗ್ರಾಮೀಣ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಲಾಗಿದೆ. ನಗರದ ರಂಗಮಂದಿರದಲ್ಲಿ ಅಂದು ಸಂಜೆ 5.30ಕ್ಕೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಅಯ್ಯಪ್ಪ ತುಕ್ಕಾಯಿ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಎಸ್ಪಿ ಎಂ.ಎನ್. ನಾಗರಾಜ್ ಹಾಗೂ ಸಹಾಯಕ ಆಯುಕ್ತ ಮಾರುತಿ, ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಡಿಡಿಪಿಐ ರಾಮಾಂಜನೇಯ, ಜಿಲ್ಲಾ ವಾರ್ತಾಧಿಕಾರಿ ಟಿ.ಕನುಮಪ್ಪ, ಜಿಲ್ಲಾ ಕಸಾಪ ಅಧ್ಯಕ್ಷ ಮಹಾಂತೇಶ್ ಮಸ್ಕಿ ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆ. ನಗರದ ಎಎಂಇ ಕಾಲೇಜಿನ ಉಪನ್ಯಾಸಕಿ ಡಾ. ರಾಜಶ್ರೀ ಕಲ್ಲೂರಕರ ಅವರು ಜಾನಪದ ಕಲೆ ಸಾಹಿತ್ಯ ನಡೆದು ಬಂದ ದಾರಿ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಆನ್ಲೈನ್ ಅರ್ಜಿ ಸಲ್ಲಿಕೆಗೆ ಸೂಚನೆ
ರಾಯಚೂರು: ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ವಿತರಿಸುರುವ ವಿವಿಧ ಪ್ರಮಾಣ ಪತ್ರಗಳಿಗಾಗಿ ಸಾರ್ವಜನಿಕರು ಸಂಬಂಧಿಸಿದ ನಾಡ ಕಚೇರಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದನ್ನು ತಪ್ಪಿಸಲು ಸರ್ಕಾರವು ಮಾ.4ರಿಂದಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆ ಮಾಡಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇನ್ನು ಮುಂದೆ ಜಿಲ್ಲೆಯ 37 ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ನೀಡುವ 25 ವಿವಿಧ ಬಗೆಯ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರು ಸಾರ್ವಜನಿಕರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಓಛ್ಠಟಿಛಡಿಢಿಢಿಢಿ.ಟಿಛಜಛ್ಞಝ್ಛಜ್ಠ್ಝಛ್ಞಛ .್ಜ್ಟಢ.್ಝಟಿ ಸಂಪರ್ಕಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

