31ರವರೆಗೆ ಕಾಲುವೆಗೆ ನೀರು ಹರಿಸದಿದ್ರೆ ಸತ್ಯಾಗ್ರಹ: ರೈತ ಸಂಘ
ಲಿಂಗಸ್ಗೂರು: ನಾರಾಯಣಪುರ ಬಲದಂಡೆ, ಎಡದಂಡೆ ಹಾಗೂ ರಾಂಪುರ ಕಾಲುವೆಗಳಿಗೆ ಮಾ. 31ರವರೆಗೆ ನೀರು ಹರಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳದಿದ್ದರೆ ರೈತರು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದೆಂದು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಸಹಾಯಕ ಆಯುಕ್ತ ಟಿ. ಯೋಗೇಶ್ರಿಗೆ ಗುರುವಾರ ಮನವಿ ಸಲ್ಲಿಸಿದರು.
ಕಾಲುವೆಗಳಿಗೆ ಮಾ. 31ರವರೆಗೆ ನೀರು ಹರಿಸುವಂತೆ ಹಲವು ಬಾರಿ ರೈತರು ಮನವಿ ಸಲ್ಲಿಸಿದರೂ ನೀರಾವರಿ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ಏಕಾಏಕಿ ಮಾ. 19ರಂದು ನೀರು ಸ್ಥಗಿತಗೊಳಿಸಿದ ಪರಿಣಾಮ ರೈತರಿಗೆ ಆಘಾತವನ್ನುಂಟು ಮಾಡಿದೆ. ಶೇಂಗಾ, ಬತ್ತ, ಹತ್ತಿ ಸೇರಿದಂತೆ ತೋಟಗಾರಿಕೆ ಬೆಳೆಗಳು ರಕ್ಷಿಸಲು ಮಾ. 31ರವರೆಗೆ ನೀರು ಹರಿಸಿದರೆ ಮಾತ್ರ ಬೆಳೆ ಉಳಿಯಲು ಸಾಧ್ಯ. ಕಾರಣ ಕಾಲುವೆಗಳಿಗೆ ನೀರು ಬಿಡುವ ಕುರಿತು ಮಾ. 21ರಂದು ಸ್ಪಷ್ಟ ತೀರ್ಮಾನ ಕೈಗೊಳ್ಳದಿದ್ದರೆ ನಾರಾಯಣಪುರ ಜಲಾಶಯದ ಹತ್ತಿರ ಜಾವೂರ್ ಕ್ರಾಸ್ ಬಳಿ ಅಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದೆಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ. ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ, ರೈತ ಮುಖಂಡರಾದ ಸಿದ್ಧಲಿಂಗೇಶ್ವರ ಪಾಟೀಲ್, ಅಮರಯ್ಯಸ್ವಾಮಿ ಹುಲಿಗುಡ್ಡ, ಮಲ್ಲಿಕಾರ್ಜುನ ಯರಗೋಡಿ, ಹನುಮಪ್ಪ ಯರಗೋಡಿ, ಗ್ಯಾನಪ್ಪ ಕಾಚಾಪೂರ, ಧರ್ಮಪ್ಪ ಗೋನವಾಟ್ಲ ತಾಂಡಾ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

