ಕಾಂಗ್ರೆಸ್‌ನಿಂದ ಸೈಕಲ್ ಜಾಥಾದಲ್ಲಿ ಮತಯಾಚನೆ
ರಾಯಚೂರು: ನಗರದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ. ನಾಯಕ ಅವರು ಸೈಕಲ್ ಜಾಥಾ ನಡೆಸುವ ಮೂಲಕ ಮತ ಯಾಚಿಸಿದರು.
ನಗರದ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಸೈಕಲ್ ಜಾಥಾ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿ ರೇಲ್ವೆ ಸ್ಟೇಷನ್ ರಸ್ತೆಯ ಶ್ರೀರಾಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾರೋಪಗೊಂಡಿತು.
ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅಭ್ಯರ್ಥಿ ಬಿ.ವಿ. ನಾಯಕ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿಯ ದೃಷ್ಟಿಯಲ್ಲಿರಿಸಿಕೊಂಡು ಮತ ನೀಡುವಂತೆ ಸಂದೇಶ ಸಾರುವ ಕಾರ್ಯ ಮಾಡಲಾಗುತ್ತಿದೆ. ತಮ್ಮ ಪ್ರತಿಸ್ಪರ್ಧಿ ಅಭ್ಯರ್ಥಿಯು ಕಣದಲ್ಲಿರುವುದರಿಂದ ಅಶಾಂತಿಯ ವಾತಾವರಣ ನಿರ್ಮಾಣವಾಗುವ ಬಗ್ಗೆ ಮತದಾರರಲ್ಲಿ ಆತಂಕವಿದೆ. ಆದರೆ ಅಂಥ ಯಾವುದೇ ರೀತಿಯ ಆತಂಕ ಬೇಡ ಎಂಬ ಉದ್ದೇಶದಿಂದಲೇ ಜಾಥಾ ಆಯೋಜಿಸಲಾಗಿದೆ ಎಂದು ಹೇಳಿದರು.
ಅಸ್ತವ್ಯಸ್ತ: ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಸೈಕಲ್ ಜಾಥಾದಲ್ಲಿ ಭಾರೀ ಸಂಖ್ಯೆ ಕಾರ್ಯಕರ್ತರು ಸೈಕಲ್ ಏರಿ ಹೊರಟಿದ್ದರಿಂದ ವಿವಿಧೆಡೆ ಸಂಚಾರಕ್ಕೆ ತೊಂದರೆಯಾಗಿ ವಾಹನಗಳ ಸವಾರರು ಪ್ರಯಾಸಪಟ್ಟು ಸಾಗುವಂತಾಯಿತು.
ನೀತಿ ಸಂಹಿತೆ ನಿರ್ಲಕ್ಷ್ಯ: ಜಿಲ್ಲಾ ಕಾಂಗ್ರೆಸ್ ವತಿಯಿಂದ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ. ನಾಯಕ ಅವರ ಪರ ಪ್ರಚಾರ ಹಿನ್ನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಸೈಕಲ್ ಜಾಥಾದಲ್ಲಿ ಮಕ್ಕಳು ಪಾಲ್ಗೊಂಡಿದ್ದರೂ ನೀತಿ ಸಂಹಿತೆಯ ಪಾಲನೆಗೆ ಗಮನಹರಿಸಬೇಕಾದ ಅಧಿಕಾರಿಗಳು ಮೌನವಹಿಸಿದ್ದ ಪ್ರಸಂಗ ನಡೆಯಿತು.
ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಮಕ್ಕಳ ಬಳಕೆ ಬಗ್ಗೆ ಮಾಹಿತಿಯಿಲ್ಲ. ಆದರೆ ಈ ಬಗ್ಗೆ ಮಾಹಿತಿ ಪಡೆದು ಸಂಬಂಧಿಸಿದ ಪ್ರದೇಶದ ನೀತಿ ಸಂಹಿತೆಯ ಪಾಲನೆ ಹೊಣೆ ಹೊತ್ತ ಅಧಿಕಾರಿಗೆ ಕರ್ತವ್ಯಲೋಪದ ಹಿನ್ನೆಲೆ ನೋಟೀಸ್ ಜಾರಿ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ರ್ಯಾಲಿಯಲ್ಲಿ ಮಕ್ಕಳ ಬಳಕೆ
ರಾಯಚೂರು: ಜಿಲ್ಲಾ ಕಾಂಗ್ರೆಸ್ ವತಿಯಿಂದ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ. ನಾಯಕ ಅವರ ಪರ ಪ್ರಚಾರ ಹಿನ್ನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಸೈಕಲ್ ಜಾಥಾದಲ್ಲಿ ಮಕ್ಕಳು ಪಾಲ್ಗೊಂಡಿದ್ದರೂ ನೀತಿಸಂಹಿತೆಯ ಪಾಲನೆಗೆ ಗಮನಹರಿಸಬೇಕಾದ ಅಧಿಕಾರಿಗಳು ಮೌನವಹಿಸಿದ್ದ ಪ್ರಸಂಗ ನಡೆಯಿತು.
ನಗರದ ಬಸವೇಶ್ವರ ವೃತ್ತದಿಂದ ನಡೆದ ಸೈಕಲ್ ಜಾಥಾದಲ್ಲಿ ಮಕ್ಕಳೂ ಸೈಕಲ್ ಏರಿ ಪಾಲ್ಗೊಂಡಿದ್ದು ಕಂಡುಬಂದಿತು. ಜಾಥಾದುದ್ದಕ್ಕೂ ಮಕ್ಕಳು ಭಾಗವಹಿಸಿದ್ದರೂ ಜಿಲ್ಲಾಡಳಿತದ ನೀತಿ ಸಂಹಿತೆಯ ಪಾಲನೆ ಮೇಲೆ ಕಣ್ಣಿಡಬೇಕಾದ ಅಧಿಕಾರಿಗಳು ಗಮನಿಸದಿರುವುದು ಸ್ಪಷ್ಟವಾಗಿತ್ತು.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಅವರು ಮಕ್ಕಳ ಬಳಕೆ ಬಗ್ಗೆ ಮಾಹಿತಿಯಿಲ್ಲ. ಆದರೆ ಈ ಬಗ್ಗೆ ಮಾಹಿತಿ ಪಡೆದು ಸಂಬಂಧಿಸಿದ ಪ್ರದೇಶದ ನೀತಿ ಸಂಹಿತೆಯ ಪಾಲನೆ ಹೊಣೆ ಹೊತ್ತ ಅಧಿಕಾರಿಗೆ ಕರ್ತವ್ಯಲೋಪದ ಹಿನ್ನೆಲೆಯ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

