ಬೀಳ್ಕೊಡುಗೆ
ರಾಯಚೂರು: ತಾಲೂಕಿನ ಉಡುಮಗಲ್ ಖಾನಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಅಂಕುಶದೊಡ್ಡಿ ಶಾಲೆಯ ಮುಖ್ಯಗುರು ಕೃಷ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳು ಗುರಿ ಸಾಧನೆಗೆ ಕಠಿಣ ಪರಿಶ್ರಮ, ಶ್ರದ್ಧೆಯಿಂದ ವ್ಯಾಸಂಗ ಮಾಡುವಂತೆ ಕರೆ ನೀಡಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಸತತ ಅಧ್ಯಯನದಲ್ಲಿ ತೊಡಗುವಂತೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲೆಯ ಮುಖ್ಯಗುರು ಬಂದೋಲಿ ವಹಿಸಿದ್ದರು. ಬೋಧಕ ಸಿಬ್ಬಂದಿ ಖಾಜಾಸಾಬ್, ಆರ್.ಪಿ. ಕುಲಕರ್ಣಿ, ರವಿ ಮುದಗಲ್, ಲಕ್ಷ್ಮಿದೇವಿ, ಭಾಗ್ಯಲಕ್ಷ್ಮಿ, ಜರೀನಾ ಅಂಜುಮ್ ಇದ್ದರು.
ಶರಣಬಸವೇಶ್ವರ ಜಾತ್ರೆ
ಸಿಂಧನೂರು: ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ಮಹಾದಾಸೋಹಿ, ಭಕ್ತರ ಆರಾಧ್ಯದೈವ ಶರಣಬಸವೇಶ್ವರ ಜಾತ್ರಾ ಮಹೋತ್ಸವ ಈಚೆಗೆ ಜನಸಾಗರದ ನಡುವೆ ವಿಜೃಂಭಣೆಯಿಂದ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ಅಂದು ಬೆಳಗ್ಗೆ ದೇವಸ್ಥಾನದಲ್ಲಿ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಧ್ಯಾಹ್ನ ಭೂರಿಗಣಾರಾಧನೆ, ಭಜಂತ್ರಿಯೊಂದಿಗೆ ನೀಲಕಂಠಪ್ಪಗೌಡರ ಹೊಲದಿಂದ ದೇವಸ್ಥಾನದವರೆಗೆ ಸಡಗರ, ಸಂಭ್ರಮದಿಂದ ಮೆರವಣಿಗೆ ನಡೆಯಿತು. ಒಳಬಳ್ಳಾರಿಯ ಸುವರ್ಣಗಿರಿ ವಿರಕ್ತಮಠದ ಚನ್ನಬಸವ ಸ್ವಾಮಿಗಳ ಸಾನಿಧ್ಯದಲ್ಲಿ ಜಾತ್ರಾ ಮಹೋತ್ಸವ ನಡೆಯಿತು. ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು, ಗಣ್ಯರು ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

