ಭ್ರಷ್ಟಾಚಾರದಲ್ಲಿ ಗಿನ್ನಿಸ್ ಮಾಡಿದ ಬಿಜೆಪಿಗೆ ತಕ್ಕಪಾಠ ಕಲಿಸಿ: ತಂಗಡಗಿ
ಕ.ಪ್ರ. ವಾರ್ತೆ ಸಿಂಧನೂರು ಮಾ.22
ಭ್ರಷ್ಟಾಚಾರದಲ್ಲಿ ಗಿನ್ನಿಸ್ ದಾಖಲೆ ಮಾಡಿರುವ ಭಾರತೀಯ ಜನತಾ ಪಕ್ಷಕ್ಕೆ ಈ ಬಾರಿ ಮತದಾರರು ತಕ್ಕ ಪಾಠ ಕಲಿಸಬೇಕೆಂದು ಸಣ್ಣ ನೀರಾವರಿ ಸಚಿವ ಎಸ್. ಶಿವರಾಜ ತಂಗಡಗಿ ಹೇಳಿದರು.
ನಗರದ ಶಾದಿಮಹಲ್ನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ದೇಶದಲ್ಲಿ ಮೋದಿ ಗಾಳಿ ಇಲ್ಲವೇ ಇಲ್ಲ. ಅವರದು ಬರೇ ಪಂಚರ್ ಗಾಲಿ ಇದ್ದಂತೆ. ದೇಶ ಉಳಿಯಲು ಪ್ರತಿಯೊಬ್ಬರು ಕಾಂಗ್ರೆಸ್ ಅಭ್ಯರ್ಥಿಗಳನ್ನೇ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದರು.
ಸ್ವಾತಂತ್ರ್ಯ ನಂತರ ಸುಮಾರು 54 ವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರ ನಡೆಸಿರುವ ಕಾಂಗ್ರೆಸ್ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಇದನ್ನು ಸಹಿಸಲಾಗದ ಬಿಜೆಪಿ ನಾಯಕರು ಭಯದ ವಾತವರಣದಲ್ಲಿದ್ದಾರೆ. ಲೋಕಸಭೆ ಮೆಟ್ಟಿಲು ಹತ್ತದ ವ್ಯಕ್ತಿಯನ್ನು ಪ್ರಧಾನಿ ಮಾಡಲು ಹೋಗುವುದನ್ನು ನೋಡಿದರೆ ಅವರಿಗೆ ದೇಶದ ಬಗ್ಗೆ ಕಾಳಿಜಿ ಇಲ್ಲವೆಂದು ತಿಳಿಯುತ್ತದೆ ಎಂದು ಟೀಕಿಸಿದರು.
ಅಭ್ಯರ್ಥಿಗಳ ಗೆಲವಿಗೆ ಪಕ್ಷದ ಸಾಧನೆ ಶ್ರೀರಕ್ಷೆ: ಕಾಂಗ್ರೆಸ್ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಇಂದಿರಾ ಆವಾಸ್ ಯೋಜನೆ, ಅನ್ನಭಾಗ್ಯ, ಕ್ಷೀರಭಾಗ್ಯ ಮಕ್ಕಳಿಗಾಗಿ ಮಧ್ಯಾಹ್ನದ ಬಿಸಿಯೂಟ- ಸರ್ವ ಶಿಕ್ಷಣ ಅಭಿಯಾನ, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್, ರಾಷ್ಟ್ರೀಯ ತೋಟಗಾರಿಕಾ ಮಿಷನ್, ಆಹಾರ ಭದ್ರತೆ ಕಾಯ್ದೆ, ಅಸಂಘಟಿತ ಕಾರ್ಮಿಕರ ವಿಮಾ ಯೋಜನೆ, ಅರಣ್ಯ ವಾಸಿಗಳ ಹಕ್ಕು ರಕ್ಷಣಾ ಕಾಯ್ದೆ ಮತ್ತಿತರ ಹಲವು ಅಭಿವೃದ್ಧಿ ಕಾರ್ಯಗಳನ್ನು ನಿರಂತರವಾಗಿ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಗೆಲವಿಗೆ ಪಕ್ಷದ ಸಾಧನೆಗಳೇ ಸಾಕ್ಷಿಯಾಗಲಿವೆ ಎಂದು ಹೇಳಿದರು.
ಶಾಸಕ ಹಂಪನಗೌಡ ಮಾತನಾಡಿ, ಗುಜರಾತ್ ಅಭಿವೃದ್ಧಿಗೊಳ್ಳಲು ಹಿಂದೆ ಕಾಂಗ್ರೆಸ್ನ ಶ್ರಮವಿದೆ. ಇದನ್ನು ಮರೆತ ಮೋದಿ ಭ್ರಷ್ಟಚಾರ ಮಾಡಿರುವ ವ್ಯಕ್ತಿಗಳನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡಿದ್ದು ನೋಡಿದರೆ ಎಲ್ಲರೂ ಭ್ರಷ್ಟ್ರರು ಎಂದು ಕಾಣುತ್ತದೆ. ರೈತರ ಬಗ್ಗೆ ಕಾಳಿಜಿ ಇರುವ ಪಕ್ಷ ಏಕೈಕ ಎಂದರೆ ಅದು ಕಾಂಗ್ರೆಸ್ ಮಾತ್ರ. ಈ ಬಾರಿ ಕಾಂಗ್ರೆಸ್ ಗಾಳಿ ಇದೆ. ಕೊಪ್ಪಳ ಲೋಕಸಭೆ ಅಭ್ಯರ್ಥಿ ಬಸವರಾಜ ಹಿಟ್ನಾಳ ಬಹುಅಂತರದಿಂದ ಗೆಲವು ಸಾಧಿಸುತ್ತಾರೆ ಎಂದು ಭವಿಷ್ಯ ನುಡಿದರು.
ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ಕೊಪ್ಪಳ ಲೋಕಸಭೆ ಅಭ್ಯರ್ಥಿ ಬಸವರಾಜ ಹಿಟ್ನಾಳ ಮಾತನಾಡಿ, ತಮ್ಮ ಗೆಲವಿಗೆ ಕಾಂಗ್ರೆಸ್ನ ಸಾಧನೆಗಳೇ ಮೆಟ್ಟಿಲುಗಳು. ಪಕ್ಷದ ವಿಶ್ವಾಸಕ್ಕೆ ಬದ್ಧವಾಗಿ ಕಾರ್ಯಕರ್ತರ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಅಂದರೆ ತಮ್ಮ ಗೆಲವು ಸುಲಭವಾಗುತ್ತದೆ ಎಂದರು.
ಸಭೆಯನ್ನು ಉದ್ದೇಶಿಸಿ ಶಾಸಕ ಪ್ರತಾಪಗೌಡ ಪಾಟೀಲ್, ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಮಾತನಾಡಿದರು. ಶಾಸಕ ರಾಘವೇಂದ್ರ ಹಿಟ್ನಾಳ, ನಗರಸಭೆ ಅಧ್ಯಕ್ಷ ಜಾಫರ್ ಅಲಿ ಜಾಗೀರದಾರ, ತಾಪಂ ಉಪಾಧ್ಯಕ್ಷ ನಾಗಪ್ಪ ಗೋಮರ್ಸಿ, ತಿಮ್ಮಯ್ಯ ನಾಯಕ, ಎಸ್.ಶರಣೇಗೌಡ, ಸಿದ್ರಾಮಪ್ಪ ಮಾಡಿಶಿರವಾರ, ಎಂ.ಕಾಳಿಂಗಪ್ಪ, ಮುರ್ತುಜಾಸಾಬ್, ಶಾಹೀನ್, ಹಾಗೂ ನಗರಸಭೆ ಸದಸ್ಯರು ಪಕ್ಷದ ಮುಖಂಡರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

