ರಾಯಚೂರು

ಕೃಷಿ, ಗ್ರಾಮೀಣಾಭಿವೃದ್ಧಿ ನಾಣ್ಯದ ಎರಡು ಮುಖ

Published On :

ಸಿಂಧನೂರು: ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಗ್ರಾಮೀಣ ಅಭಿವೃದ್ಧಿಯಾಗಬೇಕಾದರೆ ಕೃಷಿಯ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡುವುದು ಅವಶ್ಯಕವಿದೆ. ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಸಂಕೇತ ಪದವಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ಉಪನ್ಯಾಸಕ ವಿಶ್ವನಾಥ ಪಾಟೀಲ್ ಗೋನಾಳ ಹೇಳಿದರು.
ನಗರದ ಆಕ್ಸ್‌ಫರ್ಡ್ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ದಿವಂಗತ ರಾಜಾ ರಾಮರಾವ್ ನಾಡಗೌಡ ಸ್ಮಾರಕ ದತ್ತಿಯಲ್ಲಿ ಗ್ರಾಮೀಣ ಅಭಿವೃದ್ಧಿಯಲ್ಲಿ ಕೃಷಿಯ ಮಹತ್ವ ಕುರಿತು ಉಪನ್ಯಾಸ ಮಂಡಿಸಿದರು. ಕೃಷಿಯನ್ನು ನಿರ್ಲಕ್ಷ್ಯ ಮಾಡಿ ಗ್ರಾಮೀಣ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಕೃಷಿಯು ಜಗತ್ತಿನ ಹಳೆಯದಾದ ಉದ್ಯಮವಾಗಿದ್ದು, ಗ್ರಾಮೀಣ ಪ್ರದೇಶದ ಜನರು ನಗರ ಪ್ರದೇಶಕ್ಕೆ ವಲಸೆ ಹೋಗುವುದನ್ನು ತಪ್ಪಿಸಬೇಕಾದರೆ ನಗರ ಪ್ರದೇಶದಲ್ಲಿ ದೊರೆಯುವ ಕೂಲಿಯ ಹಣ ಗ್ರಾಮೀಣ ಪ್ರದೇಶದಲ್ಲಿ ಸಿಗುವಂತಾಗಬೇಕು. ಸರ್ಕಾರ ರೈತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸಬೇಕು. ರೈತರು ಸಂತೋಷದಿಂದ ಕೃಷಿ ಕಾಯಕ ಮಾಡುವಂತಾಗಬೇಕು ಎಂದರು.
ಗುಣಮಟ್ಟದ ಶಿಕ್ಷಣ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಕ್ಸ್‌ಫರ್ಡ್ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಎನ್. ಸತ್ಯನಾರಾಯಣಶೆಟ್ಟಿ ಮಾತನಾಡಿದರು. ಇವತ್ತಿನ ಪರಿಸ್ಥಿತಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಕಷ್ಟದ ಕೆಲಸವಾಗಿದೆ. ಆದರೆ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದಾಗ ಮನಸ್ಸಿಗೆ ತೃಪ್ತಿ ಸಿಗುತ್ತದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಹ್ಲಾದ ಗುಡಿ ದತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.
ರಾಜೇಶ್ವರಿ, ಅಕ್ಕಮ್ಮ ಪ್ರಾರ್ಥಿಸಿದರು. ಉಪನ್ಯಾಸಕ ಬಸನಗೌಡ ಪೊಲೀಸ್ ಪಾಟೀಲ್, ಪಂಪಯ್ಯಸ್ವಾಮಿ ಸಾಲಿಮಠ ಉಪಸ್ಥಿತರಿದ್ದರು. ಬೀರಪ್ಪ ಶಂಭೋಜಿ ಸ್ವಾಗತಿಸಿದರು. ಉಪನ್ಯಾಸಕ ಶ್ರೀನಿವಾಸ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ವೀರೇಶ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.