ರಾಯಚೂರು

ಪ್ರತಿಯೊಬ್ಬರಿಗೂ ಕಾನೂನಿನ ಜ್ಞಾನ ಅವಶ್ಯ: ನ್ಯಾ. ಭಾರತಿ

Published On :

ಸಿಂಧನೂರು: ಪ್ರತಿಯೊಬ್ಬರಿಗೂ ಕಾನೂನಿನ ಸಾಮಾನ್ಯ ಜ್ಞಾನ ಅವಶ್ಯವೆಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಭಾರತಿ ಎಸ್. ರಾಯಣ್ಣವರ್ ಹೇಳಿದರು.
ಅವರು ನಗರದ ರಾಜೇಂದ್ರಕುಮಾರ ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅತ್ಯಾಚಾರಿಗಳು ಕಠಿಣ ಶಿಕ್ಷೆಗೆ ಗುರಿಯಾಗುತ್ತಾರೆ. ಮಹಿಳೆಯರಿಗೆ ಆಸ್ತಿಯಲ್ಲಿ ಸಮಾನ ಹಕ್ಕು ಉಳ್ಳವರಾಗಿರುತ್ತಾರೆ. ದಿನ ನಿತ್ಯ ಪತ್ರಿಕೆ ಓದುವುದರಿಂದ ಸಮಾಜದಲ್ಲಿ ನಡೆಯುವ ಘಟನೆಗಳ ಬಗ್ಗೆ ತಿಳಿದುಕೊಳ್ಳಲು ಸಾಧ್ಯ. ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವುದು ಪಾಲಕರ ಆದ್ಯ ಕರ್ತವ್ಯವಾಗಿದೆ ಎಂದರು.
ನ್ಯಾಯಾಲಯದಲ್ಲಿ ಕಾನೂನು ಕ್ಲಿನಿಕ್ ಆರಂಭಿಸಲಾಗಿದೆ. ಉಚಿತ ನೆರವು ಪಡೆದುಕೊಳ್ಳುವಂತೆ ಸರ್ಕಾರಿ ಸಹಾಯಕ ಅಭಿಯೋಜಕ ಶೇಖರಪ್ಪ ಶಾಲಿಗನೂರು ಸಲಹೆ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಕೆ. ಭೀಮನಗೌಡ, ಶಾಲೆಯ ವ್ಯವಸ್ಥಾಪಕಿ ಸರಸ್ವತಿ ಪಾಟೀಲ್ ಮತ್ತಿತರರು ಭಾಗವಹಿಸಿದ್ದರು. ಹೇಮಾ ಪ್ರಾರ್ಥಿಸಿದರು. ಶಿಕ್ಷಕಿ ಸಿದ್ದೇಶ್ವರಿ ಕಾರ್ಯಕ್ರಮ ನಿರೂಪಿಸಿದರು.

ಮಕ್ಕಳಿಗೆ ಅಕ್ಷರ ಅರಿವು ಮೂಡಿಸಿ: ಸಜ್ಜನ್
ಸಿಂಧನೂರು: ಪಾಲಕರು ಕೇವಲ ಗಂಡು ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ಕೊಡದೆ ಹೆಣ್ಣು ಮಕ್ಕಳಿಗೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕೆಂದು ಬಳಗಾನೂರು ಠಾಣೆಯ ಪಿಎಸ್‌ಐ ಮಹಾಂತೇಶ ಸಜ್ಜನ್ ಸಲಹೆ ನೀಡಿದರು.
ಅವರು ತಾಲೂಕಿನ ಬಳಗಾನೂರು ಗ್ರಾಮದಲ್ಲಿ ಎಸ್‌ವಿಡಿಪಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳ ಮನಸ್ಸು ನಿಷ್ಕಲ್ಮಶವಾಗಿರುತ್ತದೆ. ಅವರಿಗೆ ಯಾವುದೇ ತಾರತಮ್ಯ ಮನೋಭಾವ ಇರುವುದಿಲ್ಲ. ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಗೊಳ್ಳಲು ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ ಎಂದರು. ಸಾನ್ನಿಧ್ಯ ವಹಿಸಿದ್ದ ಉಟಕನೂರಿನ ಮರಿಬಸವರಾಜ ದೇಶಿಕೇಂದ್ರ ಮಹಾಸ್ವಾಮಿ ಮಾತನಾಡಿದರು.
ಶಿಕ್ಷಕಿ ಸರಸ್ವತಿ ವೀರೇಶ ಸಜ್ಜನ ಕಾರ್ಯಕ್ರಮ ನಿರೂಪಿಸಿದರು. ಮೌನೇಶ ಜಿ.ಪಿ. ಸ್ವಾಗತಿಸಿದರು. ಎಸ್‌ವಿಡಿಪಿ ಶಾಲೆಯ ಅಧ್ಯಕ್ಷ ವಿಶ್ವನಾಥಗೌಡ ಅರಳಹಳ್ಳಿ, ಉಪಾಧ್ಯಕ್ಷೆ ಶಾರದ ಎಚ್. ಪಾಟೀಲ್, ಕಾರ್ಯದರ್ಶಿ ನಾಗಯ್ಯ ಗಣಚಾರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.