ರಾಯಚೂರು

ಕೊಲೆ ಆರೋಪಿಗಳಿಗೆ ಜೀವಾವಧಿ

Published On :

ರಾಯಚೂರು: ನಗರದಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ತಲಾ ಐದು ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ನಗರದ ನಿವಾಸಿ ನಾಗರಾಜ್ ಎಂಬಾತನ ಬಳಿಯಿರುವ ನಗದು ಮತ್ತಿತರೆ ವಸ್ತು ದೋಚುವ ಉದ್ದೇಶದಿಂದ ಆರೋಪಿಗಳಾದ ಸೈಯದ್ ಭಾಷಾ ಹಾಗೂ ಮಸ್ತಾನ್ ಎಂಬುವವರು ನಾಗರಾಜನನ್ನು ರಾಜಧಾನಿ ಬಾರ್ ಬಳಿಯಿಂದ ಕರೆದೊಯ್ದು, ಆತನ ಬಳಿಯಿದ್ದ 1 ಸಾವಿರ ಹಾಗೂ ಮೊಬೈಲ್ ಕಿತ್ತುಕೊಂಡು ಆತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿದ್ದರು. ಈ ಕುರಿತು ಪಶ್ಚಿಮ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಈ ಬಗ್ಗೆ ವಿಚಾರಣೆ ನಡೆಸಿದ ಪೊಲೀಸರು ಈ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪ ಸಲ್ಲಿಸಿದ್ದು, ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿ ಆರೋಪಿಗಳಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ತಲಾ ಐದು ಸಾವಿರ ದಂಡ ವಿಧಿಸಿ ಎರಡನೇಯ ಅಪರ ಸತ್ರ ನ್ಯಾಯಾಧೀಶರಾದ ಸತ್ಯನಾರಾಯಣಾಚಾರ್ಯ ಕಾಡ್ಲೂರು ತೀರ್ಪಿತ್ತಿದ್ದಾರೆ.
ದಂಡ ಕೊಡಲು ತಪ್ಪಿದಲ್ಲಿ ಮತ್ತೆ 3 ತಿಂಗಳು ಕಾರಾಗೃಹವಾಸ ಶಿಕ್ಷೆ ಅನುಭವಿಸಲು ತೀರ್ಪಿನಲ್ಲಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸಾರ್ವಜನಿಕ ಅಭಿಯೋಜಕ ಬಿ. ರಂಗಯ್ಯ ವಾದ ಮಂಡಿಸಿದ್ದರು.

ಅಭಿವೃದ್ಧಿ ಕಾರ್ಯ ವೀಕ್ಷಣೆ
ದೇವದುರ್ಗ: ತಾಲೂಕಿನ ಜಾಲಹಳ್ಳಿಯಲ್ಲಿ ಈಚೆಗೆ ಬಸ್‌ನಿಲ್ದಾಣದ ಅಭಿವೃದ್ಧಿ ಕಾಮಗಾರಿಯನ್ನು ಈಶಾನ್ಯ ಸಾರಿಗೆ ಸಂಸ್ಥೆ ರಾಯಚೂರಿನ ಸಹಾಯಕ ಅಭಿಯಂತರ ಅಣ್ಣಪ್ಪ ಪರಿಶೀಲಿಸಿದರು. ಈಚೆಗೆ ಗ್ರಾಮದ ನಿಲ್ದಾಣಕ್ಕೆ ಭೇಟಿ ನೀಡಿ ಬಸ್‌ನಿಲ್ದಾಣದಲ್ಲಿ ಕೈಗೊಂಡ ಸಿಸಿ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದ ನಂತರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ರಸ್ತೆ ಸಾರಿಗೆ ನಿಗಮದ ಈಶಾನ್ಯ ವಲಯದ ವ್ಯವಸ್ಥಾಪಕರಿಂದ 25 ಲಕ್ಷ ಅನುದಾನದಲ್ಲಿ ಬಸ್‌ನಿಲ್ದಾಣದಲ್ಲಿ ಸಿಸಿ ರಸ್ತೆ ಮತ್ತಿತರೆ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು. ಭೂದಾನಿಗಳಾದ ವೆಂಕೋಬ ಪೂಜಾರಿ, ಅಮರೇಶ ಪೂಜಾರಿ, ಗಿರಿಯಪ್ಪ ಪೂಜಾರಿ, ರಂಗಪ್ಪ ಪೂಜಾರಿ ಹಾಗೂ ಬಾಲಾಜಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.