ರಾಯಚೂರು

ಅಕ್ರಮ ಮರಳು ವಶಕ್ಕೆ ಆಗ್ರಹ

Published On :

ಯಾದಗಿರಿ: ಜಿಲ್ಲೆಯಲ್ಲಿ ಮರಳು ಸಾಗಾಣಿಕೆ ಹಾಗೂ ಮರಳನ್ನು ಸಂಗ್ರಹಿಸಿ ಇಡುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ. ಆದರೆ ಇಲ್ಲಿಗೆ ಸಮೀಪವಿರುವ ಬೀರನಕಲ್ ಗ್ರಾಮದ ಹತ್ತಿರದ ಕೆನಾಲ್ ಸಂಖೈ 24ರ ಹತ್ತಿರ ಅಕ್ರಮವಾಗಿ ಲಕ್ಷಾಂತರ ರುಪಾಯಿಗಳ ಮರಳನ್ನು ಸಂಗ್ರಹಿಸಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ  ಟಿ.ಎನ್. ಭೀಮುನಾಯಕ ದೂರಿದ್ದಾರೆ.
ಶಹಾಪುರ ತಾಲೂಕಿನ ಗೋಗಿ ಗ್ರಾಮದಿಂದ ಬೆಂಡೆಬೆಂಬಳಿ ಗ್ರಾಮದವರೆಗೆ ನಾರಾಯಣಪುರ ಎಡದಂಡೆ ಕಾಲುವೆಗಳ ದುರಸ್ತಿ (ಕೆನಾಲ್‌ಗಳ) ನವೀಕರಣದ ಕಾಮಗಾರಿಯು ಸುಮಾರು 40 ಕೋಟಿ ರುಪಾಯಿಗಳ ವೆಚ್ಚದಲ್ಲಿ  ನಡೆದಿದೆ. ಇದಕ್ಕಾಗಿ ಗುತ್ತಿಗೆದಾರರು ಸರ್ಕಾರಕ್ಕೆ ಯಾವುದೇ ರೀತಿಯ ರಾಜಸ್ವವನ್ನು ಕಟ್ಟದೆ ಅಕ್ರಮವಾಗಿ ಸುಮಾರು ಹತ್ತರಿಂದ ಹದಿನೈದು ಕಡೆ ಮರಳನ್ನು ಸಂಗ್ರಹಿಸಿದ್ದಾರೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿ ಸರ್ಕಾರಕ್ಕೆ ಮೋಸ ಮಾಡುತ್ತಿದ್ದಾರೆ. ಪ್ರತಿನಿತ್ಯ ನೂರಾರು ಟ್ರ್ಯಾಕ್ಟರ್‌ಗಳಲ್ಲಿ ಬೇರೆ ಬೇರೆ ಕಡೆಯಿಂದ ಮರಳು ತಂದು ಅಕ್ರಮವಾಗಿ ಸಂಗ್ರಹಿಸುತ್ತಿದ್ದಾರೆ ಎಂದು ನಾಯಕ ಹೇಳಿದ್ದಾರೆ.
ಕೆನಾಲ್‌ನ ಕಾಮಗಾರಿಯು ಕಳಪೆ ಮಟ್ಟದ್ದಾಗಿದ್ದು ಕಾಮಗಾರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಣ್ಣನ್ನು ಉಪಯೋಗಿಸುತ್ತಿರುವದರಿಂದ ಕೆಲವೇ ದಿನಗಳಲ್ಲಿ ಕಾಲುವೆಗಳು ಬಿರುಕು ಬಿಟ್ಟು ಕೋಟ್ಯಾಂತರ ರೂಪಾಯಿಗಳ ಸರ್ಕಾರದ ಹಣ ಪೋಲಾಗುತ್ತದೆ ಎಂದು ಹೇಳಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಮಹೇಶ ಅವರನ್ನು ಸಂಪರ್ಕಿಸಿದರೆ ಚುನಾವಣೆಯ ಕರ್ತವ್ಯದಲ್ಲಿ ಬೀಜಿಯಾಗಿರುವದರಿಂದ ಅತ್ತ ಕಡೆ ಗಮನಹರಿಸಲು ಆಗಲಿಲ್ಲ. ಯಾರೇ ಆಕ್ರಮವಾಗಿ ಮರಳು ಸಂಗ್ರಹಿಸಿದ್ದರೂ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಅಕ್ರಮವಾಗಿ ಸಂಗ್ರಹಿಸಿರುವ ಮರಳನ್ನು ವಶಪಡಿಸಿಕೊಂಡು ಇದರಲ್ಲಿ ಶಾಮೀಲಾಗಿರುವ ಅಧಿಕಾರಿಗಳ ವಿರುದ್ದ  ಕ್ರಮ ತೆಗೆದುಕೊಳ್ಳದಿದ್ದರೆ ಇಲಾಖೆಯ ಕಚೇರಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವದು ಎಂದು ಹೋಬಳಿ ಘಟಕದ ಅಧ್ಯಕ್ಷ ಶಿವುಕುಮಾರ ಕೊಂಕಲ್, ಸಂಘಟನಾ ಕಾರ್ಯದರ್ಶಿ ಅಬ್ದುಲ ಚಿಗಾನೂರ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.