ಕೊಠಡಿಗಳ ಕೊರತೆ, ವಿದ್ಯಾರ್ಥಿಗಳಿಗೆ ಬೆಂಚ್ ವ್ಯವಸ್ಥೆ
ಮುದಗಲ್: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಕ್ರಿಸ್ತಜ್ಯೋತಿ ಪ್ರೌಢಶಾಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಅರಂಭಗೊಂಡಿವೆ.
ಪದವಿಪೂರ್ವ ಕಾಲೇಜು ಕೇಂದ್ರದಲ್ಲಿ 450 ವಿದ್ಯಾರ್ಥಿಗಳ ಪೈಕಿ 447 ವಿದ್ಯಾರ್ಥಿಗಳ ಪರೀಕ್ಷೆಗೆ ಹಾಜರಾಗಿದ್ದಾರೆ. 19 ಬ್ಲಾಕ್ಗಳನ್ನು ಮಾಡಲಾಗಿದ್ದು, ರೂಂಗಳ ಕೊರತೆಯಾಗಿದ್ದರಿಂದ ಕಾಲೇಜು ಒಳ ಆವರಣದಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಬೆಂಚ್ ವ್ಯವಸ್ಥೆ ಮಾಡಲಾಗಿದೆ ಎಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥ ಪಾವಾಡೆಪ್ಪ ತಿಳಿಸಿದರು.
ಒಟ್ಟು 33 ಕೊಠಡಿ ಮೇಲ್ವೀಚಾರಕರು, 2 ಸಿಟಿಂಗ್ ಸ್ಕ್ವಾಡ್ಗಳನ್ನು ನೇಮಿಸಲಾಗಿದ್ದು, ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಅನುಕೂಲ ಮಾಡಿದೆ. ನಕಲು ತಡೆಯಲು ಪೊಲೀಸ್ ಸಿಬ್ಬಂದಿ ಇದ್ದು, ಯಾವುದೇ ನಕಲಿಗೆ ಅವಕಾಶ ನೀಡದಂತೆ ನೋಡಿಕೊಳ್ಳಲಾಗುತ್ತದೆ ಎಂದರು.
ಕ್ರಿಸ್ತಜ್ಯೋತಿ ಪ್ರೌಢಶಾಲೆಯ ಕೇಂದ್ರದಲ್ಲಿ 412 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, 6 ವಿದ್ಯಾರ್ಥಿಗಳು ಮಾತ್ರ ಗೈರು ಹಾಜರಾಗಿದ್ದಾರೆ ಎಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥ ದಾಸರ್ ತಿಳಿಸಿದರು. ಇಲ್ಲಿ ಒಟ್ಟು 18 ಬ್ಲಾಕ್ ಮಾಡಿದ್ದು, 24 ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗಿದೆ.
ಎರಡು ಕೇಂದ್ರಗಳಲ್ಲಿ ಒಟ್ಟು 17 ಪ್ರೌಢಶಾಲೆಗಳ ವ್ಯಾಪ್ತಿಯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

