ಕರ್ತವ್ಯ ಮನುಷ್ಯನ ನಿಜವಾದ ಧರ್ಮ: ಶರ್ಮಾ
ಸಿಂಧನೂರು: ಸಕ್ಕರೆಯ ಧರ್ಮ ಸಿಹಿ ಕೊಡುವುದು. ಸಿಹಿಯನ್ನು ನೀಡದಿದ್ದರೆ ಅದಕ್ಕೆ ಬೆಲೆಯಿಲ್ಲ. ಹಾಗೆಯೇ ಮಾನವನಿಗೂ ಒಂದು ನಿರ್ದಿಷ್ಟ ಧರ್ಮವಿದೆ. ಅದುವೇ ಅವನ ಕರ್ತವ್ಯ ಎಂದು ಇಸ್ಕಾನ್ ಟ್ರಸ್ಟ್ನ ಪಂಡಿತ್ ರವಿ ಶರ್ಮಾ ಹೇಳಿದರು.
ನಗರದ ಆಕ್ಸ್ಫರ್ಡ್ ಪದವಿ ಪೂರ್ವ ಮತ್ತು ಪದವಿ ಮಹಾವಿದ್ಯಾಲಯದಲ್ಲಿ ಬೆಂಗಳೂರಿನ ಇಸ್ಕಾನ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ವ್ಯಕ್ತಿತ್ವ ವಿಕಸನ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮತ್ತೊಬ್ಬ ಉಪನ್ಯಾಸಕ ಸಾರಥಿ ಶ್ಯಾಮ್ದಾಸ್ ಇಸ್ಕಾನ್ ಸಂಸ್ಥೆಯ ಬಗ್ಗೆ ಮತ್ತು ಅದು ವಿದ್ಯಾರ್ಥಿ ಏಳಿಗೆಗೆ ತೆಗೆದುಕೊಳ್ಳುತ್ತಿರುವ ಕಾರ್ಯಕ್ರಮಗಳ ಕುರಿತು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎನ್.ಸತ್ಯನಾರಾಯಣ ಶ್ರೇಷ್ಠಿ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣದ ಜೊತೆಗೆ ವ್ಯಕ್ತಿತ್ವ ವಿಕಾಸನ ಮತ್ತು ಸ್ವಾವಲಂಬಿ ಬದುಕು ನಡೆಸಲು ಬೇಕಾಗುವ ಜೀವನದ ಅಂಶಗಳನ್ನು ಪಡೆಯಬೇಕೆಂಬ ಬಯಕೆಯಿಂದ ಈ ರೀತಿ ಕಾರ್ಯಕ್ರಮಗಳನ್ನು ನಮ್ಮ ಕಾಲೇಜಿನಲ್ಲಿ ಆಯೋಜಿಸಿಸುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೊಗ ಪಡೆದುಕೂಳ್ಳಬೇಕೆಂದು ಕರೆ ನೀಡಿದರು.
ವಿದ್ಯಾರ್ಥಿಗಳಾದ ಗಂಗಾಭವಾನಿ, ಸರಫರಾಜ್ ಸೈಯದ್ ಶೋಯೆಬ್ ಅನಿಸಿಕೆ ವ್ಯಕ್ತಪಡಿಸಿದರು. ಕಾಲೇಜಿನ ಉಪನ್ಯಾಸಕ ವೃಂದ, ವಿದಾರ್ಥಿ ವೃಂದ ಪಾಲ್ಗೊಂಡಿದ್ದರು. ರವಿ ಶರ್ಮಾ ಮತ್ತು ಸಾರಥಿ ದಾಸ, ಕಾಲೇಜಿನ ಉಪನ್ಯಾಸಕ ರವಿಕುಮಾರ ಮಸ್ಕಿ ಅವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕ ಶ್ರೀನಿವಾಸ ಯಾಳಗಿ ಕಾರ್ಯಕ್ರಮ ನಿರ್ವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

