ರಾಯಚೂರು

ಯುವತಿ ಆತ್ಮಹತ್ಯೆ; ಶವವಿಟ್ಟು ಪ್ರತಿಭಟನೆ

Published On :

ಸಿಂಧನೂರು: ತಾಲೂಕಿನ ಬಳಗಾನೂರು ಗ್ರಾಮದಲ್ಲಿ ತನ್ನ ಪ್ರಿಯಕರನಿಂದ ಹಲ್ಲೆಗೊಳಗಾದ ಯುವತಿಯೊಬ್ಬಳು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ಗ್ರಾಮದ ನಿವಾಸಿ ಶ್ರೀದೇವಿ ಆದಪ್ಪ(22) ಮೃತ ದುರ್ದೈವಿ. ಗ್ರಾಮದ ಅಣ್ಣಯ್ಯ ಎನ್ನುವ ಯುವಕ ಮತ್ತು ಶ್ರೀದೇವಿ ಬಹುದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. 15 ದಿನಗಳ ಹಿಂದೆ ಮದುವೆ ಮಾಡಿಕೊಳ್ಳುವ ಉದ್ದೇಶದಿಂದ ಮನೆ ಬಿಟ್ಟು ಹೋಗಿದ್ದರು. ವಿಷಯ ತಿಳಿದ ಎರಡೂ ಮನೆಯವರು ಮದುವೆ ಮಾಡಿಸುವುದಾಗಿ ಹೇಳಿ ವಾಪಸ್ ಕರೆದುಕೊಂಡು ಬಂದಿದ್ದರು. ತದನಂತರ ಅಣ್ಣಯ್ಯನು ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದನು.
ಜಗಳ: ಆದರೆ ಯುವತಿಯ ಮನೆಯವರು ಮದುವೆ ಮಾಡಿಕೊಳ್ಳುವಂತೆ ಒತ್ತಡ ಹೇರುತ್ತಿದ್ದರು. ಇದೇ ಕಾರಣಕ್ಕೆ ಅಣ್ಣಯ್ಯ ಮತ್ತವರ ಕುಟುಂಬದವರು ಶ್ರೀದೇವಿ ಮನೆಯ ಮುಂದೆ ಜಗಳ ತೆಗೆದಿದ್ದಾರೆ. ಈ ವೇಳೆ ಎರಡೂ ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದಿದೆ. ಆಗ ಅಣ್ಣಯ್ಯನು ಯುವತಿಯ ಕುಟುಂಬದವರನ್ನು ಅವಾಚ್ಯವಾಗಿ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಇದರಿಂದ ಮನನೊಂದ ಯುವತಿ ತನ್ನ ಮನೆಯ ಮುಂದೆಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಕುರಿತಂತೆ ಅಣ್ಣಯ್ಯ ಹಾಗೂ ಐದು ಜನ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಪಿಎಸ್‌ಐ ಮಹಾಂತೇಶ ಸಜ್ಜನ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.