ರಾಯಚೂರು

ಕಾರ್ಯಾಚರಣೆ: ಅಕ್ರಮ ಮದ್ಯ ವಶ

Published On :

ಸಿಂಧನೂರು: ತಾಲೂಕಿನ ಗುಡಗಲದಿನ್ನಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಅಮರಪ್ಪನ ಮನೆ ಮೇಲೆ ಅಬಕಾರಿ ಇಲಾಖೆ ದಾಳಿ ಮಾಡಿ ಮದ್ಯ ವಶಪಡಿಸಿಕೊಂಡಿದ್ದಾರೆ. ಭೇಟಿಯಾದ ಸುದ್ದಿಗಾರರೊದಿಗೆ ಮಾತನಾಡಿದ ಅಬಕಾರಿ ಇಲಾಖೆಯ ಉಪನಿರ್ದೇಶಕ ತಿಪ್ಪಯ್ಯ ರು. 7000  ಮೌಲ್ಯದ 25.380 ಲೀಟರ್ ಮದ್ಯ ಮತ್ತು ನಗರದ ವಾಣಿ ಬಾರ್ ಹತ್ತಿರ ರು. 8100 ಮೌಲ್ಯದ 1100 ಬೀರ್ ಬಾಟಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಬಕಾರಿ ಇಲಾಖೆ ಉಪನಿರ್ದೇಶಕ ಬಸವರಾಜ ಸಿಬ್ಬಂದಿ ಇದ್ದರು.
ಸೇಂದಿ ಮಾರಾಟ: ಮಹಿಳೆ ಬಂಧನ
ರಾಯಚೂರು ವರದಿ: ನಗರದ ಮಿಲ್ಟನ್ ಶಾಲೆಯ ಬಳಿಯಿರುವ ಮಡ್ಡಿಪೇಟೆಯಲ್ಲಿ ಸೇಂದಿ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳನ್ನು ನರಸಮ್ಮ ಎಂದು ಗುರುತಿಸಲಾಗಿದೆ. ಈಕೆ ಅಕ್ರಮವಾಗಿ ಸೇಂದಿ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಆಕೆಯಿಂದ 1ಪ್ಲಾಸ್ಟಿಕ್ ಕೊಡದಲ್ಲಿದ್ದ 10ಲೀ ಸೇಂದಿ ಹಾಗೂ ನಗದು ರು. 50 ಜಪ್ತಿ ಮಾಡಿದ್ದಾರೆ. ಈ ಕುರಿತು ನಗರದ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.




Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.