ಜಯಕ್ಕೆ ಸಿದ್ದರಾಮಯ್ಯ ಸರ್ಕಾರದ ಸಾಧನೆ ಸಾಕು
ಸಿಂಧನೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸಾಧನೆಗಳೇ ಕ್ಷದ ಅಭ್ಯರ್ಥಿಗಳಿಗೆ ಜಯ ತಂದುಕೊಡುತ್ತವೆ ಎಂದು ರಾಜ್ಯ ಅಬಕಾರಿ ಸಚಿವ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಭಾನುವಾರ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಹಿಟ್ನಾಳ ಪರ ಪ್ರಚಾರಕ್ಕೆ ಆಗಮಿಸಿದ್ದ ಸುದ್ದಿಗಾರರೊಂದಿಗೆ ಮಾತನಾಡಿದರು. ಮೋದಿ ಹೆಸರಿನಲ್ಲಿ ಚುನಾವಣೆ ಮಾಡಿದರೆ ಮತದಾರರು ಬಲಿಗೆ ಬೀಳಲು ದಡ್ಡರಲ್ಲ. ಸ್ಥಳೀಯ ಸಮಸ್ಯೆಗಳಿಂದ ನೀರಾವರಿ, ರಸ್ತೆ, ಕುಡಿಯುವ ನೀರು ಮತ್ತಿತರ ಸೌಲಭ್ಯಗಳನ್ನು ಗಣನೆಗೆ ತೆಗೆದುಕೊಳ್ಳುವ ಅಭ್ಯರ್ಥಿ ಗಳನ್ನು ಆಯ್ಕೆ ಮಾಡುತ್ತಾರೆ.
ವಿವಿಧ ಸೌಲಭ್ಯ: ರಾಜ್ಯ ಸರ್ಕಾರ ನೀರಾವರಿ ಯೋಜನೆಗೆ ಒಂದು ಸಾವಿರ ಕೋಟಿ ಒದಗಿಸಿದೆ. ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಎಲ್ಲಾ ಜನಾಂಗದ ಬಡವರ ಸಾಲ ಮನ್ನಾ ಮಾಡಲಾಗಿದೆ. ಇಡೀ ಭಾರತದಲ್ಲಿಯೇ ಕ್ರಾಂತಿಕಾರಕ ಸ್ವರೂಪದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ತರುವ ಮೂಲಕ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಸಿಗುವಂತೆ ಮಾಡಿದ ಜನಪರ ಸರ್ಕಾರವಾಗಿದೆ ಎಂದು ವಿವರಿಸಿದರು. ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗಮಾರ ಮಾತನಾಡಿ, ನರೇಂದ್ರ ಮೋದಿ ಅಭಿವೃದ್ಧಿಯೆಂದರೆ ಗೋದ್ರಾ ಹತ್ಯಾಕಾಂಡ, 800 ರೈತರ ಆತ್ಮಹತ್ಯೆಯಂತಹ ಪ್ರಕರಣಗಳು. ಇಂತಹವರಿಂದ ಅಭಿವೃದ್ಧಿ ಸಾಧ್ಯವೆ ಎಂದು ಪ್ರಶ್ನಿಸಿದರು.
ಭರವಸೆ: ಲೋಕಸಭಾ ಅಭ್ಯರ್ಥಿ ಬಸವರಾಜ ಹಿಟ್ನಾಳ ಕೃಷ್ಣಾ ಬಿ ಸ್ಕೀಂನ ಸಮಗ್ರ ನೀರು ಪಡೆಯಲು, ಮುನಿರಾಬಾದ್, ಮಹಿಬೂಬನಗರ ಮತ್ತು ಗದಗ-ವಾಡಿ ರೈಲು ಮಾರ್ಗ ನಿರ್ಮಾಣಕ್ಕೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.
ಕೊಪ್ಪಳ ಕ್ಷೇತ್ರದಾದಂತ್ಯ ಭೋವಿ ಸಮಾಜವು ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಮುಖಂಡ ಕೇಶವ ಭೋವಿ ನೇತೃತ್ವದಲ್ಲಿ ಆಗಮಿಸಿದ್ದ ನೂರಾರು ಜನರ ತಂಡ ಘೋಷಿಸಿತು. ಶಾಸಕರಾದ ಹಂಪನಗೌಡ ಬಾದರ್ಲಿ, ರಾಘವೇಂದ್ರ ಹಿಟ್ನಾಳ, ಮುಖಂಡರಾದ ಎನ್. ಶಿವನಾಗಪ್ಪ, ಎಂ.ಕಾಳಿಂಗಪ್ಪ ವಕೀಲ, ಯಮನಪ್ಪ ಮಲ್ಲಾಪೂರ, ಜಿ.ಪಂ. ಸದಸ್ಯರಾದ ಚಂದುಸಾಬ ಮುಳ್ಳೂರು, ಶಿವನಗೌಡ ಎಲಕೂಡ್ಲಿಗಿ, ನಗರಸಭೆ ಅಧ್ಯಕ್ಷ ಜಾಫರ ಅಲಿ ಜಾಗೀರದಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

