ರಸೀದಿ ಕೇಳಿದರೆ ದೌರ್ಜನ್ಯ!
ಕ.ಪ್ರ. ವಾರ್ತೆ ಸಿಂಧನೂರು ಮೇ 1
ತಾಲೂಕಿನ ತುರ್ವಿಹಾಳ ಗ್ರಾಮದಲ್ಲಿ ಮದ್ಯ ಖರೀದಿ ಮಾಡಿ ರಸೀದಿ ಕೇಳಿದರೆ ದೌರ್ಜನ್ಯ ಮಾಡುತ್ತಾರೆ ಎಂದು ಬಿಜೆಪಿ ಮುಖಂಡ ಸಂಜಿ ಸಿದ್ದನಗೌಡ ಮಾಟೂರು ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನಿಷ್ಠ ಬೆಲೆಗಿಂತ ಹೆಚ್ಚಿನ ಹಣ ಪಡೆಯುವ ನರಸಯ್ಯ ಮತ್ತು ಶಾಮೀದ್‌ಸಾಬ ಅವರ ಬಾರ್‌ಗಳಲ್ಲಿ 30ಕ್ಕಿಂತ ಅಧಿಕ ಹಣ ಪಡೆಯುತ್ತಾರೆ. ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದರೆ ಹೆಚ್ಚಿನ ಬೆಲೆ ಪಡೆದಿದ್ದರ ಬಗ್ಗೆ ರಸೀದಿ ತೆಗೆದುಕೊಂಡು ಬಂದರೆ ತಪ್ಪಿತಸ್ಥರ ಬೆಲೆ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಾರೆ. ರಸೀದಿ ಕೇಳಿದರೆ ಬಾರ್ ಮಾಲೀಕರು ಹಲ್ಲೆ ಮಾಡುತ್ತಾರೆ. ಇದಕ್ಕೆ ಸಂಬಂಧಿಸಿದಂತೆ ತುರ್ವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಸಂಗತಿಯನ್ನು ನೆನಪಿಸಿದರು.
ಇದಲ್ಲದೆ ತುರ್ವಿಹಾಳ ಹೊರತುಪಡಿಸಿ ಇನ್ನಿತರ ಕಡೆ ಅಕ್ರಮ ಮದ್ಯ ಮಾರಾಟವಾಗುತ್ತಿದ್ದು ಶಾಸಕ ಪ್ರತಾಪಗೌಡ ಪಾಟೀಲರ ಅಂಗಡಿಗಳಿಂದ ಸರಬರಾಜು ಆಗುತ್ತಿದೆ ಎಂದು ಸಿದ್ದನಗೌಡ ಆರೋಪಿಸಿದರು.
ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡುತ್ತಿರುವ ಬಾರ್ ಮಾಲೀಕರು ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಅಬಕಾರಿ ಇಲಾಖೆಯ ಜಿಲ್ಲಾ ಕಮಿಷನರ್ ಕಚೇರಿಯ ಮುಂದೆ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
ಮುಖಂಡರಾದ ಶರಣಪ್ಪ ಹೊಸಗೌಡರ್, ಸಿದ್ದು ಆರ್., ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶರಣಪ್ಪಬಸಪ್ಪ ರಡ್ಡೇರ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

