ರಾಯಚೂರು

ಬಸವ ಪ್ರತಿಮೆಗೆ ಅಲಂಕಾರ

Published On :

ಸಿಂಧನೂರು: ಸಿಂಧನೂರಿನ ಬಸವ ವೃತ್ತದಲ್ಲಿ ನಿರ್ಮಿಸಲಾಗಿರುವ ಕುದುರೆ ಮೇಲಿನ ಬಸವಣ್ಣನ ಪ್ರತಿಮೆಗೆ ಹಾಗೂ ಕಾಂಪೌಂಡ್‌ಗೆ ಬಣ್ಣ ಹಚ್ಚಿ ಗುರುವಾರ ಅಲಂಕರಿಸಲಾಯಿತು.
ಬಸವ ಪ್ರತಿಮೆ ಸುತ್ತ ಬೀಡುಬಿಟ್ಟಿದ್ದ ತರಕಾರಿ ವ್ಯಾಪಾರಿಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಿ ವೃತ್ತದ ಸುತ್ತ ಮರಂ ಹಾಕಿ, ನೀರು ಸಿಂಪಡಿಸಿ, ರಂಗೋಲಿ ಹಾಕಿ ತಳಿರು ತೋರಣವನ್ನು ಕಟ್ಟಲಾಗಿದೆ.
ಬಸವ ಜಯಂತಿ ಪ್ರಯುಕ್ತ ಈಗಾಗಲೇ ಬಸವ ಚಾರಿಟಬಲ್ ಟ್ರಸ್ಟ್ ಹಾಗೂ ಬಸವಕೇಂದ್ರ, ಯುವ ಬಸವ ಕೇಂದ್ರ, ಮಹಿಳಾ ಬಸವ ಕೇಂದ್ರ, ಅಕ್ಕನ ಬಳಗ ವತಿಯಿಂದ ಪ್ರತಿದಿನ ಆರ್‌ಜಿಎಂ ಮೈದಾನದಲ್ಲಿ ವಿವಿಧ ವಿದ್ವಾಂಸರಿಂದ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿದೆ.
ತಾಲೂಕಾಡಳಿತದ ನೇತೃತ್ವದಲ್ಲಿ ಮೇ 2ರಂದು 881ನೇ ವಿಶ್ವಗುರು ಬಸವಣ್ಣನವರ ಜಯಂತ್ಯುತ್ಸವದ ಅಂಗವಾಗಿ ತಹಸೀಲ್ದಾರ್ ಕಾರ್ಯಾಲಯದಿಂದ ಮ. 3ಗಂಟೆಗೆ ನಗರದ ಪ್ರಮುಖ ಬೀದಿಗಳಲ್ಲಿ ಬಸವಣ್ಣನವರ ಭಾವಚಿತ್ರದ ಜೊತೆಗೆ ಇತರ ಶರಣರ ಭಾವಚಿತ್ರ ಅದ್ಧೂರಿ ಮೆರವಣಿಗೆ ಹಾಗೂ ಸಂಜೆ 5ಕ್ಕೆ ಆರ್‌ಜಿಎಂ ಶಾಲಾ ಆವರಣದಲ್ಲಿ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಮಸ್ಕಿಯಲ್ಲಿಂದು ಮೆರವಣಿಗೆ(ಮಸ್ಕಿ ವರದಿ): ಪಟ್ಟಣದಲ್ಲಿ ಬಸವೇಶ್ವರರ ಜಯಂತಿ ಅಂಗವಾಗಿ ಮೇ 2ರಂದು ಬಸವಣ್ಣನವರ ಭಾವಚಿತ್ರದ ಮೆರವಣಿಗೆ ಆಯೋಜಿಸಲಾಗಿದೆ ಎಂದು ಬಸವ ಜಯಂತಿ ಆಚರಣೆ ಸಮಿತಿ ತಿಳಿಸಿದೆ. ಅಂದು ಬೆಳಗ್ಗೆ 10ಕ್ಕೆ ಪಟ್ಟಣದ ಭ್ರಮರಾಂಭ ದೇವಸ್ಥಾನದಿಂದ ಆರಂಭಗೊಳ್ಳುವ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಲು ಬಸವ ಜಯಂತಿ ಆಚರಣೆ ಸಮಿತಿ ಹಾಗೂ ಮಹಾಮನೆ ಕಾರ್ಯಕಾರಿ ಸಮಿತಿ ಅಧ್ಯಕ್ಷ ತಿಮ್ಮನಗೌಡ ಗುಡದೂರು, ಉಪಾಧ್ಯಕ್ಷ ಡಾ. ಬಿ.ಎಚ್. ದಿವಟರ್ ಮನವಿ ಮಾಡಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.