ಬಹಿರ್ದೆಸೆ ಮುಕ್ತ ಗ್ರಾಮಕ್ಕೆ ಸಹಕರಿಸಿ
ಕ.ಪ್ರ. ವಾರ್ತೆ ಲಿಂಗಸ್ಗೂರು ಮೇ 1
ಗುರುಗುಂಟಾ ಗ್ರಾಮವನ್ನು ಬಯಲು ಮಲವಿಸರ್ಜನೆ ಮುಕ್ತ ಗ್ರಾಮವನ್ನಾಗಿಸಲು ಸಾರ್ವಜನಿಕರು ಸಹಕಾರ ನೀಡುವುದು ಅಗತ್ಯ ಎಂದು ದೆಹಲಿಯ ಫೀಲ್ಡ್ಬ್ಯಾಕ್ ಫೌಂಡೇಶನ್ ಅಧಿಕಾರಿ ಶಿವಕುಮಾರ ಶರ್ಮಾ ಮನವಿ ಮಾಡಿದರು.
ತಾಲೂಕಿನ ಗುರುಗುಂಟಾ ಗ್ರಾಪಂ ಆವರಣದಲ್ಲಿ ಜಲನಿರ್ಮಲ, ಜಿಪಂ ಹಾಗೂ ಗ್ರಾಪಂ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಬಯಲು ಶೌಚಾಲಯದಿಂದ ಅನೇಕ ರೋಗಗಳು ಹರಡುವ ಸಾಧ್ಯತೆಯಿದ್ದು, ಇದುವರೆಗೆ ವೈಯಕ್ತಿಕ ಶೌಚಾಲಯ ನಿರ್ಮಿಸದಿರುವುದು ವಿಷಾದನೀಯ ಸಂಗತಿ ಎಂದರು.
ಸರ್ಕಾರ ಗ್ರಾಪಂ ನೇತೃತ್ವದಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸಹಕಾರ ನೀಡುತ್ತಿದೆ. ರಾಯಚೂರು ಜಿಲ್ಲೆಯಲ್ಲಿ 15 ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಬಯಲು ಮಲವಿಸರ್ಜನೆ ಮುಕ್ತ ಗ್ರಾಮವನ್ನಾಗಿಸಲು ಮುಂದಾಗಿದೆ. ಇದರಲ್ಲಿ ಗುರುಗುಂಟಾ ಗ್ರಾಮ ಸೇರ್ಪಡೆಗೊಂಡಿದ್ದು, ಗ್ರಾಪಂ ಆಡಳಿತ ಮಂಡಳಿ ಜೂ.25ರೊಳಗೆ ಬಯಲು ಮಲವಿಸರ್ಜನೆ ಮುಕ್ತ ಗ್ರಾಮವನ್ನಾಗಿಸಲು ನಿರ್ಧರಿಸಿದೆ.
ಪ್ರೋತ್ಸಾಹ ಧನ: ಗ್ರಾಪಂ ವತಿಯಿಂದ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ 4,700 ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ 5,400 ಮತ್ತು ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 5 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತದೆ. ಗ್ರಾಮಸ್ಥರು ಸಹಕಾರ ನೀಡುವ ಮೂಲಕ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಮುಂದಾಗಬೇಕು ಎಂದು ಮನವಿ ಮಾಡಿದರು.
ಜಲನಿರ್ಮಲ ಇಲಾಖೆ ಅಧಿಕಾರಿ ಡಾ.ರಾಜು, ಸಹನಿರ್ದೇಶಕ ಜಗದೀಶ, ರಾಮಣ್ಣ, ಗ್ರಾಪಂ ಮಾಜಿ ಉಪಾಧ್ಯಕ್ಷ ಶೇಖರಪ್ಪ ದೊಡ್ಡಮನಿ, ಮುಖಂಡರಾದ ಗೋವಿಂದ ನಾಯಕ, ಗುರುಬಸವ ನಾಯಕ, ಯಲ್ಲಪ್ಪ, ಅಂಬಣ್ಣ, ಇಸ್ಮಾಯಿಲ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

