ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಸ್ತೆ ತಡೆ
ಸಿಂಧನೂರು: ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಹಲವಾರು ವರ್ಷಗಳಿಂದ ದುಡಿಯುತ್ತಿರುವ ನೂರಾರು ಕಾರ್ಮಿಕರಿಗೆ ಸೇವಾ ಸೌಲಭ್ಯ ಹಾಗೂ ಉದ್ಯೋಗ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ಟಿಐಸಿಯು ನೇತೃತ್ವದಲ್ಲಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ರಸ್ತೆ ತಡೆ ನಡೆಸಲಾಯಿತು.
ರಾಯಚೂರು ಜಿಲ್ಲೆಯಾದ್ಯಂತ ಮೇ ದಿನಾಚರಣೆಯನ್ನು ಸಂಘರ್ಷ ದಿನವನ್ನಾಗಿ ಹಮ್ಮಿಕೊಂಡಿರುವ ಅಂಗವಾಗಿ ನಗರದಲ್ಲಿ 15 ನಿಮಿಷಗಳ ಕಾಲ ರಸ್ತೆ ತಡೆ ಚಳವಳಿಯನ್ನು ನಡೆಸಿತು. ಇದರ ಪರಿಣಾಮ ಸಾರ್ವಜನಿಕ ಸಂಚಾರಕ್ಕೆ ತೀವ್ರ ವ್ಯತ್ಯಯ ಉಂಟಾಯಿತು. ಕುಷ್ಟಗಿ, ಗಂಗಾವತಿ, ರಾಯಚೂರು ಮತ್ತು ಮಸ್ಕಿ ರಸ್ತೆಗಳಲ್ಲಿ ನೂರಾರು ವಾಹನಗಳ ಸಂಚಾರ ಸ್ಥಗಿತವಾಯಿತು.
ಪಾಳೇಗಾರ ನೀತಿ: ಕಳೆದ 15 ವರ್ಷಗಳಿಂದ 828 ಕಾರ್ಮಿಕರು ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದು, ಏಕಾಏಕಿ 250ಕ್ಕೂ ಹೆಚ್ಚು ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಿರುವ ವಿಶ್ವವಿದ್ಯಾಲಯದ ಉಪಕುಲಪತಿ ಬಿ.ವಿ. ಪಾಟೀಲ್ ಅವರು ಪಾಳೇಗಾರರಂತೆ ವರ್ತಿಸುತ್ತಿದ್ದಾರೆ ಎಂದು ಟಿಯುಸಿಐ ರಾಜ್ಯಾಧ್ಯಕ್ಷ ಡಿ.ಎಚ್.ಪೂಜಾರ ಟೀಕಿಸಿದರು.
ಹುಸಿ ಬೆಂಬಲ: ರಸ್ತೆ ತಡೆ ಚಳವಳಿ ಬೆಂಬಲಿಸಿ ಮಾತನಾಡಿದ ನೀರಾವರಿ ಇಲಾಖೆಯ ಗುತ್ತಿಗೆ ನೌಕರರ ಮುಖಂಡ ವಾದಿ ರಾ ಜ್ ರಾಜ್ಯ ಸರ್ಕಾರ ಕಾರ್ಮಿಕ ಪರವಾಗಿ ಇದೆ ಎಂದು ಹೇಳಿಕೊಳ್ಳುತ್ತಾ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದೆ ಎಂದು ಆಪಾದಿಸಿದರು. ಗಂಗಾಧರ ಬುದ್ದಿನ್ನಿ ಮನವಿ ಪತ್ರ ಓದಿ, ತಹಸೀಲ್ದಾರ್ ಜಗನ್ನಾಥ ರೆಡ್ಡಿ ಅವರಿಗೆ ಸಲ್ಲಿಸಿದರು.
ಕೃಷಿ ವಿವಿ ಹಂಗಾಮಿ ಕಾರ್ಮಿಕರಿಗೆ ಸೇವಾ ಸೌಲಭ್ಯ ಹಾಗೂ ಉದ್ಯೋಗ ಭದ್ರತೆ ನೀಡಬೇಕು. ಜಿಲ್ಲೆಯಾದ್ಯಂತ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ, ದಿನಗೂಲಿ ಸೇವೆಯನ್ನು ನಿಯಮಾನುಸಾರ ಮುಂದುವರೆಸಬೇಕು. ಕಾರ್ಮಿಕ ಕಾಯ್ದೆಗಳ ಸಾಧಕ-ಬಾಧಕಗಳ ಬಗ್ಗೆ ತನಿಖೆ ನಡೆಸಬೇಕು. ಕೂಲಿ ಕದಿಯುವ ಮಾಲಿಕರು ಹಾಗೂ ಗುತ್ತಿಗೆದಾರರನ್ನು ಜೈಲಿಗೆ ಕಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು. ಮುಖಂಡರಾದ ಬಸವರಾಜ ಕೊಂಡೆ, ಬಸಪ್ಪ ಕಡಬೂರು, ಎಚ್.ಎನ್. ಬಡಿಗೇರ, ನಾಗರಾಜ ಪೂಜಾರ, ಬಸವರಾಜ ಇ.ಜೆ.ಹೊಸಳ್ಳಿ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

