ಬಿರುಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತ
ರಾಯಚೂರು: ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಶನಿವಾರ ಸಂಜೆ ಬಿರುಗಾಳಿ ಸಹಿತ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿತು. ನಗರದಲ್ಲಿ ಸಂಜೆಯಾಗುತ್ತಿದ್ದಂತೆಯೇ ಬಿರುಗಾಳಿ ಬೀಸಿ ಅರ್ಧಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದರಿಂದ ಕಳೆದ ಕೆಲದಿನಗಳ ಬಿರುಬಿಸಿಲಿನಿಂದ ಕಂಗೆಟ್ಟಿದ್ದ ನಗರದ ಜನತೆಗೆ ತಂಪಿನ ಅನುಭವವಾಯಿತು. ಆದರೆ ಬಿರುಗಾಳಿಗೆ ಕೈಕೊಟ್ಟ ವಿದ್ಯುತ್ನಿಂದ ಜನತೆ ತೊಂದರೆ ಪಡಬೇಕಾಯಿತು. ಸಂಜೆ 4.45ರ ಸುಮಾರಿಗೆ ಆರಂಭಗೊಂಡ ಬಿರುಗಾಳಿ ಸಹಿತ ಮಳೆಯು ಅರ್ಧ ಗಂಟೆ ಸುರಿಯಿತು. ಆದರೆ ಬಿರುಗಾಳಿಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡ ವಿದ್ಯುತ್ ಸಂಜೆ 7ರವರೆಗೆ ಮರಳಲಿಲ್ಲ. ಆನಂತರದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಯಾಟ ಮುಂದುವರಿದಿದ್ದರಿಂದ ಜನತೆ ತೊಂದರೆಗೆ ಸಿಲುಕಿದರು. ನಗರದಲ್ಲಿ ಸುರಿದ ಮಳೆ ವಾತಾವರಣದಲ್ಲಿ ತಂಪುತಂದಿತು. ಬಿರುಗಾಳಿ, ಮಳೆಯಿಂದ ಕೆಲಕಾಲ ರಸ್ತೆ ಸಂಚಾರಕ್ಕೆ ವ್ಯತ್ಯಯವಾಗಿತ್ತು. ತಾಲೂಕಿನ ಮಾಲದೊಡ್ಡಿ ಗ್ರಾಮದಲ್ಲಿ ಗುಡಿಸಲಿಗೆ ಹೊದಿಸಿದ ಮೇಲ್ಚಾವಣಿಯು ಬಿರುಗಾಳಿಗೆ ಸಿಲುಕಿ ಕಿತ್ತು ಹೋಗಿದೆ. ಗುಡುಗು ಸಹಿತ ಬಿರುಗಾಳಿಯಿಂದ ಕೂಡಿದ ಮಳೆಗೆ ಗ್ರಾಮೀಣ ಭಾಗದಲ್ಲಿ ಜನಜೀವನ ತೊಂದರೆಗೆ ಸಿಲುಕಿತೆಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

