ರಾಯಚೂರು

ಜಾತಿ ತಾರತಮ್ಯ ಖಂಡನೀಯ

Published On :

ಲಿಂಗಸ್ಗೂರು: ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಸಿಕೊಂಡು ಬರುತ್ತಿರುವ ಪಂಕ್ತಿಭೇದ ನಿಲ್ಲಿಸಬೇಕೆಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ(ಎಂ) ಕಾರ್ಯಕರ್ತರು ಸೋಮವಾರ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ದೇವರು, ಧರ್ಮದ ಹೆಸರಿನಲ್ಲಿ ಅಮಾನವೀಯ ಕೃತ್ಯಗಳು ನಡೆಯುತ್ತ ಬರುತ್ತಿದ್ದು, ಉಡುಪಿ ಕೃಷ್ಣ ಮಠದ ಭೋಜನಾ ಶಾಲೆಯಲ್ಲಿ ಊಟಕ್ಕೆ ಕುಳಿತಿದ್ದ ವನಿತಾ ಶೆಟ್ಟಿ ಎಂಬುವರನ್ನು ಜಾತಿ ಯಾವುದು ಎಂದು ಪ್ರಶ್ನಿಸಿ ಪಂಕ್ತಿಯಿಂದ ಎಬ್ಬಿಸಿ ಹೊರಗೆ ಕಳುಹಿಸಿ ಅವಮಾನ ಮಾಡಿದ ಘಟನೆ ಜರುಗಿದೆ. ಜಾತಿ ತಾರತಮ್ಯಕ್ಕೆ ಒಳಪಡಿಸಿ ಅವಮಾನಿಸಿರುವುದು ಖಂಡನೀಯ ಕ್ರಮವಾಗಿದೆ. ತಕ್ಷಣ ಪಂಕ್ತಿಭೇದ ನಿಲ್ಲಿಸಿ ಜನಸಾಮಾನ್ಯರಿಗೆ ಒಂದೇ ರೀತಿಯಲ್ಲಿ ಊಟ ಬಡಿಸುವ ವ್ಯವಸ್ಥೆ ಮಾಡಬೇಕೆಂದು ಸರ್ಕಾರ ಮಠಕ್ಕೆ ನಿರ್ದೇಶನ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ವೇಳೆ ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ಕೆ.ಎಸ್. ಶಿವಾನಂದ, ಮುಖಂಡರಾದ ಶಿವಪ್ಪ ಮಸ್ಕಿ, ಪರಶುರಾಮ್ ಹಲ್ಕಾವಟಗಿ, ಹನುಮಂತ ನಾಗಲಾಪುರ, ಯಮನೂರ, ರಂಗನಾಥ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.