ಸಾಹಿತ್ಯ ಪರಿಷತ್ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ: ಶಾಸ್ತ್ರಿ
ಕ.ಪ್ರ. ವಾರ್ತೆ ಯಾದಗಿರಿ ಮೇ 5
ಶತಮಾನದ ಹೊಸ್ತಿಲಲ್ಲಿ ಕಾಲಿಡುತ್ತಿರುವ ಸಾಹಿತ್ಯ ಪರಿಷತ್ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿದೆ ಎಂದು ಹಿರಿಯ ಸಾಹಿತಿ ಜಿ.ಎಸ್. ಬಸವರಾಜ ಶಾಸ್ತ್ರಿ ನುಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಲ್ಲಿನ ಹಿಂದಿ ಪ್ರಚಾರ ಸಭಾ ಸಭಾಂಗಣದಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಷತ್ ಶತಮಾನದ ಹೊಸ್ತಿಲಲ್ಲಿ ಕಾಲಿಡುತ್ತಿರುವುದು ಕನ್ನಡಿಗರಿಗೆ ಸಂತಸದ ಸಂಗತಿ. ಇಂತಹ ಸಂದರ್ಭದಲ್ಲಿ ನಾಡಿನ ಎಲ್ಲಾ ಕನ್ನಡದ ಮನಸ್ಸುಗಳು ಒಗ್ಗೂಡಬೇಕು ಎಂದು ಸಲಹೆ ನೀಡಿದರು.
ಸಾಹಿತ್ಯ ಪರಿಷತ್ ನಡೆದು ಬಂದ ದಾರಿಯ ಕುರಿತು ಉಪನ್ಯಾಸ ನೀಡಿದ ಸಾಹಿತಿ ವೆಂಕಟರಾವ್ ಕುಲಕರ್ಣಿ ಮಾತನಾಡಿ, 1915ರ ಮೇ 5ರಂದು ಬೆಂಗಳೂರಿನ ಶಂಕರಾಪುರ ಬಡಾವಣೆಯಲ್ಲಿ ಒಂದು ಚಿಕ್ಕ ಕೋಣೆಯಲ್ಲಿ ಆರಂಭವಾಗಿರುವ ಸಾಹಿತ್ಯ ಪರಿಷತ್ ಇಂದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಮೈಸೂರು ಸಂಸ್ಥಾನದ ದಿವಾನರಾಗಿದ್ದ ಸರ್ ಎಂ . ವಿಶ್ವೇಶ್ವರಯ್ಯನವರ ವಿಶೇಷ ಆಸಕ್ತಿ ಹಾಗೂ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ ರಾಜಾಶ್ರಯದೊಂದಿಗೆ ಪರಿಷತ್ ಆರಂಭವಾಯಿತು. ಇದುವರೆಗೆ 80 ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿದ್ದ ಪರಿಷತ್ 24 ಜನ ಕೇಂದ್ರ ಪರಿಷತ್ತಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ ಮಾತನಾಡಿ, ಕೇಂದ್ರ ಪರಿಷತ್ತಿನ ಸೂಚನೆಯಂತೆ ಶತಮಾನೋತ್ಸವವನ್ನು ಇಂದು ಸಾಂಕೇತಿಕವಾಗಿ ಉದ್ಘಾಟಿಸಲಾಗುತ್ತಿದ್ದು, ಬರುವ ದಿನಗಳಲ್ಲಿ ಅದ್ಧೂರಿಯಾಗಿ ಕೇಂದ್ರ ಪರಿಷತ್ತಿನ ಸಹಯೋಗದೊಂದಿಗೆ ಏರ್ಪಡಿಸಲಾಗುವುದು ಎಂದು ಹೇಳಿದರು.
ಡಾ. ಸುಭಾಷಚಂದ್ರ ಕೌಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿಗಳಾಗಿ ತಾಲೂಕು ಕಸಾಪ ಅಧ್ಯಕ್ಷ ಶ್ರೀನಿವಾಸ ಕರ್ಲಿ, ಸಾಹಿತಿ ಎಸ್.ಎಸ್. ನಾಯಕ್, ಅಯ್ಯಣ್ಣ ಹುಂಡೇಕಾರ, ನರಸಿಂಹಗುಪ್ತ ಬಳಿಚಕ್ರ, ಮಹಾದೇವಪ್ಪ ತುಮಕೂರು, ವಿಶ್ವಾನಾಥರೆಡ್ಡಿ ಗೊಂದಡಗಿ, ಖಂಡಪ್ಪ ದಾಸನ್, ಭೀಮರಾಯ ಲಿಂಗೇರಿ, ಸ್ವಾಮಿದೇವ ದಾಸನಕೇರಿ, ಬಸವರಾಜ ಬಾನಾರ, ಶ್ರೀಶೈಲ ಪೂಜಾರಿ, ನಾಗೇಶ ಸಜ್ಜನ್, ದೇವಿಂದ್ರ ರೆಡ್ಡಿ ಯಡ್ಡಳ್ಳಿ, ಭೀಮೇಶ ಸಜ್ಜನ್, ನೂರಂದಪ್ಪ ಲೇವಡಿ, ಮನೋಹರ್ ವಡಿಗೇರಾ, ದೇವರಾಜ ವರಕನಳ್ಳಿ ಇದ್ದರು.
ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಪ್ರಕಾಶ ಅಂಗಡಿ ಕನ್ನಳ್ಳಿ ಕಾರ್ಯಕ್ರಮ ನಿರೂಪಿಸಿದರು. ಜ್ಞಾನೇಶ್ವರ ಸಂದ್ಯಾನಕಾರ ಪ್ರಾರ್ಥಿಸಿದರು. ಭಾಗ್ಯವತಿ ಕೆಂಭಾವಿ ವಂದಿಸಿದರು. ಸಾಹೇಬಗೌಡ ಬಿರಾದಾರ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

