ಕಸಾಪ ಪಾತ್ರ ಮಹತ್ವದ್ದು
ದೇವದುರ್ಗ: ಕನ್ನಡದ ನಾಡು-ನುಡಿ, ನೆಲ-ಜಲ ಕಾಪಾಡಲು ಮತ್ತು ಕನ್ನಡಿಗರಲ್ಲಿ ಐಕ್ಯತೆ, ಸಹಕಾರ ಬೆಳೆಸುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜನ್ಮ ತಾಳಿದ್ದು, ಈ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಅಧ್ಯಕ್ಷ ಭೀಮೋಜಿರಾವ್ ಜಗತಾಪ್ ಹೇಳಿದರು.
ಅವರು ಈಚೆಗೆ ಪಟ್ಟಣದ ಸರ್ಕಾರಿ ಶಾಲೆ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಹಾಗೂ ಶತಮಾನೋತ್ಸವದ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿ, 1915ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕನಸಿನ ಕೂಸಾಗಿ ಆರಂಭಗೊಂಡ ಕನ್ನಡ ಸಾಹಿತ್ಯ ಪರಿಷತ್ತು ಇಂದು ಶತಮಾನದ ಹೊಸ್ತಿಲಲ್ಲಿದೆ. ಆದರೆ ಈಚಿನ ದಿನಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ರಾಜಕೀಯ ಸೊಂಕು ತಗಲುತ್ತಿರುವುದು ಕಳವಳಕಾರಿ ಸಂಗತಿ ಎಂದರು.
ಇತಿಹಾಸ: ವಿಕಾಸ್ ಅಕಾಡೆಮಿ ಅಧ್ಯಕ್ಷ ಯು. ಭೀಮರಾವ್, ಸದ್ಯ ರಾಜ್ಯದಲ್ಲಿ ಕನ್ನಡಕ್ಕೆ ಒದಗಿರುವ ದುಸ್ಥಿತಿಗೆ ಆತಂಕ ವ್ಯಕ್ತಪಡಿಸಿ, ಕನ್ನಡ ಭಾಷೆ ಆಂಗ್ಲ ಭಾಷೆಗಿಂತಲೂ ಸುದೀರ್ಘ ಇತಿಹಾಸ ಹೊಂದಿದೆ. ಅದರ ಉಳಿವಿಗಾಗಿ ಪ್ರತಿಯೊಬ್ಬ ಕನ್ನಡಿಗನೂ ಶ್ರಮಿಸಬೇಕೆಂದರು.
ತಾಲೂಕು ಕಸಾಪ ಅಧ್ಯಕ್ಷ ನರಸಿಂಗರಾವ್ ಸರಕೀಲ್ ಮಾತನಾಡಿದರು. ಪ್ರಮುಖರಾದ ಪ್ರಕಾಶ್ ಅಬಕಾರಿ ವಕೀಲರು, ಎಚ್. ದಂಡಪ್ಪ, ದೈಹಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕೆ. ಮಲ್ಲಯ್ಯ, ನಾಗರಾಜ ಕೊಳ್ಳಿ, ಪ್ರಾಣೇಶ ಶೆಟ್ಟಿ, ಬಸವ ರಾಜ ಮಡಿವಾಳ, ಮುನಿಯಪ್ಪ ನಾಗೋಲಿ, ಶಂಕರ ಉಭಾಳೆ, ಬಸವರಾಜ ಬಾಗೂರು, ಶಿವರಾಜ ಗೆಜ್ಜಭಾವಿ, ದಾವಲಸಾಬ ಬಂಡಿ ಸೇರಿ ಅನೇಕರಿದ್ದರು.
-------
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

