ಕಾರ್ಮಿಕ ವಿರೋಧಿ ನೀತಿಗೆ ಖಂಡನೆ
ದೇವದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆಂದು ಸಿಐಟಿಯು ಮುಖಂಡ ಗಿರಿಯಪ್ಪ ಪೂಜಾರಿ ಆರೋಪಿಸಿದರು.
ತಾಲೂಕಿನ ಗಬ್ಬೂರು ಗ್ರಾಮದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ಸಿಐಟಿಯು ತಾಲೂಕು ಸಮಿತಿಯಿಂದ ಪ್ರಾರ್ಥಮಿಕ ಶಾಲಾ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿಯಾಗಿವೆ. ಕಾರ್ಮಿಕರ ಹೋರಾಟ ಹತ್ತಿಕ್ಕಲು ಎಸ್ಮಾ ಕಾಯಿದೆ ಜಾರಿಗೊಳಿಸಿವೆ ಎಂದು ಆರೋಪಿಸಿದರು.
ಕಾರ್ಮಿಕರಿಗೆ ಕನಿಷ್ಠ ವೇತನ ನೀಡುತ್ತಿಲ್ಲ. ಅಸಂಘಟಿತ ಕಾರ್ಮಿಕರಿಗೆ ಸಮಗ್ರವಾದ ಕಾನೂನು ಜಾರಿಗೊಳಿಸದೇ ಶೋಷಣೆಗೊಳಪಡಿಸಿವೆ. ಕಾರ್ಮಿಕರನ್ನು ಒಡೆದಾಳುವ ನೀತಿಯಿಂದಾಗಿ ಕಾರ್ಮಿಕರ ಏಕತೆಗೆ ಭಂಗ ಉಂಟಾಗುತ್ತಿದೆ. ಜಾಗತೀಕರಣ, ಖಾಸಗೀಕರಣದಿಂದ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ ಎಂದು ಟೀಕಿಸಿದರು. ಎಲ್ಲ ಕಾರ್ಮಿಕರು ಒಗ್ಗೂಡಿ ಜಾಗತೀಕರಣ, ಖಾಸಗೀಕರಣದ ವಿರುದ್ಧ ಸಂಘಟಿತ ಹೋರಾಟಕ್ಕೆ ಮುಂದಾಗುವ ಅವಶ್ಯಕತೆಯಿದೆ ಎಂದು ಹೇಳಿದರು. ಈ ಸಂದರ್ಭ ಕಟ್ಟಡ ಕಾರ್ಮಿಕರ ಸಂಘಟನೆ ಮುಖಂಡ ಸಿದ್ದಪ್ಪ ಕುಂಬಾರ ಮಾತನಾಡಿದರು. ಸಿಐಟಿಯು ಅಧ್ಯಕ್ಷೆ ಲೀಲಾವತಿ, ಹಮಾಲರ ಸಂಘದ ಅಧ್ಯಕ್ಷ ಮನೋಹರ್, ಸಂಗಮ್ಮ ಮರಡಿ, ಬಿಬ್ಬಣ್ಣ, ಪಾರ್ವತಿ, ಶಶಿಕಲಾ, ಬೂದೆಪ್ಪ, ಪ್ರಭು ಯಾದವ್, ಪಂಚಯ್ಯ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

