ರಾಯಚೂರು

'ರೈತ ವಿರೋಧಿ ನೀತಿಗೆ ಅನ್ನದಾತ ದಿವಾಳಿ'

Published On :

ಲಿಂಗಸ್ಗೂರು: ಆಳುವ ಸರ್ಕಾರಗಳು ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ನೀಡದೆ ರೈತ ವಿರೋಧಿ ನೀತಿಗಳೇ ಅನ್ನದಾತನ ದಿವಾಳಿತನಕ್ಕೆ ಎಡೆಮಾಡಿಕೊಡುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಆರೋಪಿಸಿದರು.
ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಂಗಳವಾರ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾರಾಯಣಪುರ ಬಲದಂಡೆ ಹಾಗೂ ತುಂಗಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ರೈತರು ಬತ್ತ ಮತ್ತು ಶೇಂಗಾ ಬೆಳೆದಿದ್ದಾರೆ. ಪ್ರತಿ ಎಕರೆಗೆ ಸಾವಿರಾರು ರು. ಖರ್ಚು ಮಾಡಿ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಇಲ್ಲದೆ ರೈತರು ಪರಿತಪಿಸುವಂತಾಗಿದೆ. ಇಂದಲ್ಲ ನಾಳೆ ಉತ್ತಮ ಬೆಲೆ ಸಿಗಲಿದೆ ಎಂದು ತಿಂಗಳುಗಟ್ಟಲೇ ದಾಸ್ತಾನು ಮಾಡಿದರೂ ಇದುವರೆಗೆ ಬೆಲೆಯಲ್ಲಿ ಏರಿಕೆ ಕಾಣದೆ ರೈತರು ಕಂಗಾಲಾಗಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಬತ್ತಕ್ಕೆ 1300 ರು.ವರೆಗೆ ಮಾರಾಟವಾಗಿದೆ. ಆದರೆ ಪ್ರಸ್ತುತ ಬೇಸಿಗೆ ಹಂಗಾಮಿನಲ್ಲಿ ಬೆಳೆದ ಬತ್ತಕ್ಕೆ ಇಂದು ಕೇವಲ 900 ರು.ವರೆಗೆ ಕುಸಿತವಾಗಿದೆ. ಇದಕ್ಕೆ ಸರ್ಕಾರದ ನಿರ್ಲಕ್ಷ್ಯ ಪ್ರಮುಖ ಕಾರಣವಾಗಿದೆ ಹಾಗೂ ರೈತರ ಸಮಸ್ಯೆ ಬಗ್ಗೆ ಬೇಹುಗಾರಿಕೆ ಸರ್ಕಾರಕ್ಕೆ ಸರಿಯಾಗಿ ವರದಿ ಕಳುಹಿಸದೆ ಸಂಪೂರ್ಣ ವಿಫಲವಾಗಿದೆ. ರೈತರ ನಿರೀಕ್ಷೆ ಹುಸಿಯಾದ ಪ್ರಯುಕ್ತ ಅತ್ಯಂತ ಕಡಿಮೆ ದರದಲ್ಲಿ ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ. ಕೂಡಲೇ ಬತ್ತ ಮತ್ತು ಶೇಂಗಾ ಬೆಳೆಗೆ ನಿರಂತರ ಖರೀದಿ ಕೇಂದ್ರ ಆರಂಭಿಸಿ ರೈತರ ನೆರವಿಗೆ ಧಾವಿಸಬೇಕೆಂದು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.