ರಾಯಚೂರು

ಬತ್ತ ಖರೀದಿ ಕೇಂದ್ರ ಆರಂಭಕ್ಕೆ ಕ್ರಮ

Published On :

ರಾಯಚೂರು: ಜಿಲ್ಲೆಯಲ್ಲಿ ಬತ್ತದ ದರ ಕುಸಿತದ ಹಿನ್ನೆಲೆ ಬೆಂಬಲ ಬೆಲೆಯಲ್ಲಿ ಬತ್ತ ಖರೀದಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಅಕ್ರಮ ಮರಳು ಸಾಗಣೆ ತಡೆಗೆ ವಿವಿಧ ಇಲಾಖೆಗಳ ಅಧಿಕಾರಿಗಳಿರುವ ತಂಡ ರಚಿಸಲಾಗುತ್ತದೆ. ಮರಳು ಸಾಗಣೆ ಪರವಾನಗಿಯ ನಕಲಿ ದಾಖಲೆ ತಯಾರಿಕೆ ತಡೆಗೆ ಇಲಾಖೆಯ ಹೋಲೋಗ್ರಾಂ ಅಳವಡಿಸಲು ಲೋಕೋಪಯೋಗಿ ಇಲಾಖೆ ಚಿಂತನೆ ನಡೆಸಿದೆ.
ಶಕ್ತಿನಗರದಲ್ಲಿ ಬುಧವಾರ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಇ.ವೆಂಕಟಯ್ಯ ಈ ವಿಷಯ ತಿಳಿಸಿ, ಜಿಲ್ಲೆಯಲ್ಲಿ ಸದ್ಯ ಬತ್ತದ ದರ ಕುಸಿತ ಕಂಡಿರುವ ಬಗ್ಗೆ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಸರ್ಕಾರದ ಮಟ್ಟದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಖರೀದಿ ಕೇಂದ್ರ ತೆರೆಯಲು ಪೂರಕ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಅಕ್ರಮ ಮರಳು- ತಂಡ ರಚನೆ: ಜಿಲ್ಲೆಯಲ್ಲಿ ಕೃಷ್ಣಾ ನದಿಯಿಂದ ಅಕ್ರಮವಾಗಿ ಮರಳು ಮೇಲೆತ್ತಿ ಸಾಗಿಸುತ್ತಿರುವ ದೂರುಗಳು ಕೇಳಿಬಂದಿದ್ದು, ಅದರ ತಡೆಗೆ ವಿವಿಧ ಇಲಾಖೆಗಳ ಅಧಿಕಾರಿಗಳಿರುವ ತಂಡ ರಚಿಸಲು ಚಿಂತನೆ ನಡೆದಿದೆ. ಆ ಮೂಲಕ ಮರಳು ಸಾಗಣೆ ತಡೆಗೆ ಕಠಿಣ ಕ್ರಮ ಅನುಸರಿಸಲಾಗುತ್ತದೆ. ಗ್ರಾಮ ಮಟ್ಟದಲ್ಲಿನ ಅಧಿಕಾರಿಗಳಿಗೂ ಈಗಾಗಲೇ ಅಕ್ರಮ ತಡೆಗೆ ಅಧಿಕಾರ ನೀಡಲಾಗಿದೆ. ಆದರೆ ಅವರು ಕೆಲ ಒತ್ತಡಗಳ ಕಾರಣಕ್ಕೆ ಸಮರ್ಪಕ ಕಾರ್ಯನಿರ್ವಹಿಸುತ್ತಿಲ್ಲ. ಪರಿಣಾಮ ಅಕ್ರಮಕ್ಕೆ ದಾರಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಈಗಾಗಲೇ ರಾಜ್ಯದ ಬಳ್ಳಾರಿಯಲ್ಲಿ ಇಂಥ ಪದ್ಧತಿ ಜಾರಿಯಲ್ಲಿದೆ ಎಂದು ತಿಳಿಸಿದರು.
ತಾತ್ಕಾಲಿಕ ಸೇತುವೆ- ಸಮಾಲೋಚಿಸಿ ಕ್ರಮ: ಕೃಷ್ಣಾ ನದಿಗೆ ದೇವದುರ್ಗ ತಾಲೂಕಿನಲ್ಲಿ ಅಕ್ರಮವಾಗಿ ಮರಳು ಸಾಗಣೆ ಮಾಡಲೆಂದೇ ತಾತ್ಕಾಲಿಕ ಸೇತುವೆ ನಿರ್ಮಿಸಿಕೊಂಡಿರುವ ಬಗ್ಗೆ ರಾಯಚೂರು ಮತ್ತು ಯಾದಗಿರಿ ಡಿಸಿಗಳೊಂದಿಗೆ ಸಮಾಲೋಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.