ತುರ್ತು ಪರಿಸ್ಥಿತಿಯಲ್ಲಿ ರೆಡ್‌ಕ್ರಾಸ್ ಕಾರ್ಯ ಶ್ಲಾಘನೀಯ
ರಾಯಚೂರು: ಜನರ ನೋವಿಗೆ ತುರ್ತು ಸ್ಪಂದಿಸಲು ಹಾಗೂ ಸಮಾಜ ಸೇವೆಯ ಉದ್ದೇಶದಿಂದ ಒಬ್ಬ ವ್ಯಕ್ತಿ ಆರಂಭಿಸಿದ ರೆಡ್‌ಕ್ರಾಸ್ ಸಂಸ್ಥೆಯು ಇಂದು ವಿಶ್ವವ್ಯಾಪಿ ಕಾರ್ಯ ಚಟುವಟಿಕೆ ವಿಸ್ತರಿಸಿ ಕೊಂಡಿದೆ. ಇದು ಹೆಮ್ಮೆಯ ಸಂಗತಿ ಎಂದು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಮೆಚ್ಚುಗೆ ವ್ಯಕ್ತಪಡಿಸಿದರು.
ಎಎಂಇ ಡೆಂಟಲ್ ಕಾಲೇಜಿನಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಗೂ ಎಂಎಇ ಡೆಂಟಲ್ ಕಾಲೇಜ್ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ಹಾಗೂ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಜನರ ನೆರವಿಗೆ: ಮಹಾನ್ ಯುದ್ಧಗಳ ವೇಳೆ ಜನರ ನೋವಿಗೆ ತುರ್ತು ಸ್ಪಂದಿಸಲು ಜಾನ್ ಹೆಂಡ್ರಿ ಡ್ಯುನಾಂಟ್ ರೆಡ್‌ಕ್ರಾಸ್ ಸಂಸ್ಥೆಯನ್ನು 1895ರಲ್ಲಿ ಹುಟ್ಟುಹಾಕಿದರು. ಆಗ ಕೇವಲ ರಕ್ತದಾನಕ್ಕೆ ಸೀಮಿತಗೊಂಡಿದ್ದ ಸಂಸ್ಥೆಯು ಈಗ ಎಲ್ಲ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸುತ್ತಿದೆ ಎಂದು ಹೇಳಿದರು.
ಪ್ರಪಂಚದ ಯಾವುದೇ ಮೂಲೆಯಲ್ಲಿ ಪ್ರಕೃತಿ ವಿಕೋಪ, ಮಾನವ ವಿಕೋಪಗಳು ಸಂಭವಿಸಿದರೆ ಅಲ್ಲಿಗೆ ಧಾವಿಸುವ ರೆಡ್‌ಕ್ರಾಸ್ ಸಂಸ್ಥೆಯವರು ತಮ್ಮ ಸೇವೆಯ ಮೂಲಕ ಜನರ ಸಂರಕ್ಷಣೆ ಕಾರ್ಯ ಮಾಡುತ್ತಿದೆ. ಸುನಾಮಿ, ಭೂಕಂಪ ಸೇರಿ ಇನ್ನಿತರ ಪ್ರಕೃತಿ ವಿಕೋಪಗಳ ವೇಳೆ ಸಂಸ್ಥೆ ಸಮಾಜ ಮುಖಿ ಕಾರ್ಯ ಮಾಡುತ್ತದೆ ಎಂದು ತಿಳಿಸಿದರು.
ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ: ವಿದೇಶದ ಯಾವುದೋ ಮೂಲೆಯಲ್ಲಿದ್ದ ಸಂಸ್ಥೆಯನ್ನು ದೇಶದಲ್ಲಿ ಸ್ಥಾಪಿಸುವ ಮೂಲಕ ದೇಶದ ಪ್ರತಿ ಜಿಲ್ಲೆ, ತಾಲೂಕು ಘಟಕಗಳಲ್ಲಿ ಸಂಸ್ಥೆಯ ಘಟಕಗಳನ್ನು ಆರಂಭಿಸುವ ಮೂಲಕ ಮಹತ್ತರ ಕೊಡುಗೆಯನ್ನು ನಾಲ್ವಡಿ ಕೃಷ್ಣರಾಜ ಒಡೆಯರ ಹಾಗೂ ಅವರ ನಂತರ ಅವರ ಪುತ್ರ ನರಸಿಂಹರಾಜ್ ಒಡೆಯ ಪೋಷಿಸಿ ಬೆಳೆಸಿದರು ಎಂದರು.
ರಿಮ್ಸ್ ರಕ್ತನಿಧಿ ಘಟಕದ ವೈದ್ಯಾಧಿಕಾರಿ ಡಾ. ಪ್ರಸನ್ನ ಕುಮಾರ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆ ರೋಗಿಗಳ ಮರು ಹುಟ್ಟಿಗೆ ಕಾರಣವಾಗಿದೆ. ಪ್ರತಿಯೊಬ್ಬರ ಜೀವ ಅಮೂಲ್ಯವಾಗಿದ್ದು, ಹಲವು ಸಂದರ್ಭದಲ್ಲಿ ರಕ್ತದ ಕೊರತೆಯಿಂದ ಜೀವ ಕಳೆದುಕೊಳ್ಳುವ ಸಾಧ್ಯತೆಯಿರುತ್ತದೆ. ಆದರೆ ಅಂಥ ತುರ್ತು ಸಂದರ್ಭದಲ್ಲಿ ನೆರವಾಗುತ್ತಿದೆ ಎಂದು ಹೇಳಿದರು. ಸಮಾರಂಭದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ಸೋಮಶೇಖರ ಹೊಸಮನಿ, ಎಎಂಇ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿ. ರಾಜಣ್ಣ, ಕಾರ್ಯದರ್ಶಿ ಎಸ್.ಬಿ. ಪಾಟೀಲ್, ಪ್ರಾಚಾರ್ಯ ಡಾ. ಗುರುರಾಜ ರಾವ್ ಸೇರಿದಂತೆ ಅನೇಕರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ರೆಡ್‌ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

