ರಾಯಚೂರು

ಹಣ ಕದ್ದಿದ್ದ ಆಟೋ ಚಾಲಕನ ಬಂಧನ

Published On :

ರಾಯಚೂರು: ಮಹಿಳಾ ಪ್ರಯಾಣಿಕರೊಬ್ಬರ ಗಮನ ಬೇರೆಡೆ ಸೆಳೆದು ಅವರ ಬಳಿಯಿದ್ದ ವ್ಯಾನಿಟಿ ಬ್ಯಾಗ್ನಲ್ಲಿನ 2 ಲಕ್ಷ ಹಣ, 2 ಮೊಬೈಲ್ಗಳೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ನಗರದ ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಎಂ.ಎನ್. ನಾಗರಾಜ್, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಗರದ ಎಲ್ಬಿಎಸ್ ಬಡಾವಣೆಯ ನಿವಾಸಿ ಆಟೋ ರಿಕ್ಷಾ ಚಾಲಕ ಸಿಕಂದರ್(30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಬೇಧಿಸಲು ತನಿಖಾ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ತಂಡವು ಆರೋಪಿಯನ್ನು ಮೇ 10ರಂದು ಬಂಧಿಸಿದೆ ಎಂದು ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಶಪಡಿಸಿಕೊಂಡ ನಗದು ಹಾಗೂ ಎರಡು ಮೊಬೈಲ್ಗಳನ್ನು ಅವರು ಯರಮರಸ್ ಕ್ಯಾಂಪ್ ನಿವಾಸಿ ಶಶಿಕಲಾ ಅವರಿಗೆ ಮರಳಿಸಿದರು.
ಸಿಸಿ ಟಿವಿ ಕ್ಯಾಮೆರಾ ನೆರವು: ಆರೋಪಿ ಬಂಧಿಸುವಲ್ಲಿ ನಗರದ ಆಯಕಟ್ಟಿನ ಸ್ಥಳದಲ್ಲಿ ಪೊಲೀಸ್ ಇಲಾಖೆ ಅಳವಡಿಸಿರುವ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ದೃಶ್ಯಗಳು ನೆರವಾಗಿವೆ. ವ್ಯಾನಿಟಿ ಬ್ಯಾಗ್ನಲ್ಲಿ ನಗದು, ಮೊಬೈಲ್ಗಳನ್ನು ಇಟ್ಟುಕೊಂಡಿದ್ದ ಶಶಿಕಲಾ ಸ್ಥಳೀಯ ತೀನ್ ಕಂದೀಲ್ ಬಳಿ ಏ.24ರಂದು ಆಟೋ ರಿಕ್ಷಾ ಹತ್ತಿ ಬಸ್ ನಿಲ್ದಾಣಕ್ಕೆ ತೆರಳಿದ್ದರು. ನಿಲ್ದಾಣದ ಮುಂದಿನ ಹೊಟೇಲ್ ಬಳಿ ಇಳಿದಾಗ ಅಪರಿಚಿತ ಆಟೋ ರಿಕ್ಷಾ ಚಾಲಕ ಗಮನ ಬೇರೆಡೆ ಸೆಳೆದ. ನಂತರ ವ್ಯಾನಿಟಿ ಬ್ಯಾಗ್ನಲ್ಲಿದ್ದ 2 ಲಕ್ಷ ಮತ್ತು ಮೊಬೈಲ್ಗಳನ್ನು ಲಪಟಾಯಿಸಿದ್ದ. ಈ ಬಗ್ಗೆ ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಸೋಮಲಾಪುರ ಗ್ರಾಪಂ ಅಧ್ಯಕ್ಷರಾಗಿ ಶ್ರೀನಿವಾಸ
ಸಿಂಧನೂರು: ತಾಲೂಕಿನ ಸೋಮಲಾಪುರ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಎಸ್. ಶ್ರೀನಿವಾಸ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ವೀರರಾಜು ರಾಜೀನಾಮೆಯಿಂದ ತೆರನಾದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯಿತು. ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಿ.ಜಿ. ಹೂಗಾರ, ಸಹಾಯಕ ಅಧಿಕಾರಿ ಶಿವಪ್ಪ ಸುಬೇದಾರ ಚುನಾವಣಾ ಪ್ರಕ್ರಿಯೆ ನಡೆಸಿದರು.
ಅಭಿನಂದನೆ: ಎಸ್. ಶ್ರೀನಿವಾಸರವರನ್ನು ಜಿ.ಪಂ. ಮಾಜಿ ಸದಸ್ಯ ಕೆ. ಕರಿಯಪ್ಪ ಭೇಟಿ ನೀಡಿ ಅಭಿನಂದಿಸಿದರು. ಮಾಜಿ ಅಧ್ಯಕ್ಷ ವೀರರಾಜು, ಮುಖಂಡರಾದ ಅಯ್ಯಪ್ಪ, ಶಿವಪ್ಪ, ಗೋವಿಂದರಾಜು, ಮಾರ್ಕೆಂಡೆಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.