26ರಿಂದ ಗ್ರಾಪಂ ನೌಕರರ ಅನಿರ್ದಿಷ್ಟಾವಧಿ ಧರಣಿ
ರಾಯಚೂರು: ಗ್ರಾಪಂ ನೌಕರರ ಅನುಮೋದನೆ, ಹೊಸ ಹಾಗೂ ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 26ರಿಂದ ರಾಜ್ಯ ಗ್ರಾಪಂ ನೌಕರರ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ಆಯೋಜಿಸಲಾಗಿದೆ.
ನಗರದ ಜಿಪಂ ಎದುರು ಸಂಘದ ಪದಾಧಿಕಾರಿಗಳು ಧರಣಿ ನಡೆಸಲಿದ್ದು, ಜಿಲ್ಲೆಯ 165 ಗ್ರಾ.ಪಂ.ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1400ಕ್ಕೂ ಹೆಚ್ಚಿನ ಸಂಖ್ಯೆಯ ನೌಕರರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಸಂಘ ತಿಳಿಸಿದ್ದು, ಗ್ರಾಪಂ ನೌಕರರು ಗ್ರಾಮೀಣ ಪ್ರದೇಶದ ವಿವಿಧ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ಜನರ ಜೀವನಾಡಿಯಾಗಿದ್ದಾರೆ. ಆದರೆ ಅಂಥವರಿಗೆ ವಿವಿಧ ಸವಲತ್ತು ಒದಗಿಸುವ ನಿಟ್ಟಿನಲ್ಲಿ ಆಡಳಿತ ಅಸಡ್ಡೆ ತೋರುತ್ತಿದೆ ಎಂದು ಟೀಕಿಸಿದೆ.
ಈ ಹಿನ್ನೆಲೆಯಲ್ಲಿ ಗ್ರಾಪಂ ನೌಕರರ ಅನುಮೋದನೆ, ಬಾಕಿ ವೇತನ ಪಾವತಿಗೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 26ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಜೆ.ಎಂ. ಚನ್ನಬಸಯ್ಯ, ಮತ್ತಿತರರು ಜಿಪಂ ಸಿಇಒಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.
ಅಗ್ನಿಶಾಮಕ ದಳದಿಂದ ಅಣಕು ಪ್ರದರ್ಶನ
ದೇವದುರ್ಗ: ಪಟ್ಟಣದ ಜ್ಞಾನಗಂಗಾ ಶಾಲೆಯಲ್ಲಿ ಇತ್ತೀಚೆಗೆ ಮಕ್ಕಳ ಬೇಸಿಗೆ ಶಿಬಿರದ ಸಂದರ್ಭ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕುರಿತು ಅಣಕು ಪ್ರದರ್ಶನ ಆಯೋಜಿಸಲಾಗಿತ್ತು. ತುರ್ತು ಪರಿಸ್ಥಿತಿಯನ್ನು ಎದುರಿಸುವ ಬಗೆಯ ಕುರಿತು ಶಾಲಾ ಮಕ್ಕಳಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಿದರು. ಬೆಂಕಿ ಹೊತ್ತಿಕೊಂಡಾಗ ಅದನ್ನು ನಿಯಂತ್ರಿಸಲು ಅನುಸರಿಸಬೇಕಾದ ತಂತ್ರಗಳ ಬಗ್ಗೆ ಅಣಕು ಪ್ರದರ್ಶನದ ಮೂಲಕ ತಿಳಿ ಹೇಳಲಾಯಿತು. ಅಗ್ನಿಶಾಮಕ ದಳದ ಠಾಣಾಧಿಕಾರಿ ಟಿ.ಎಚ್. ಕೃಷ್ಣ, ಜ್ಞಾನಗಂಗಾ ಶಾಲೆಯ ಬೋಧಕ ವರ್ಗದವರು ಹಾಗೂ ವಿದ್ಯಾರ್ಥಿಗಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

