ನಡೆ, ನುಡಿ ಶುದ್ಧವಿದ್ದಲ್ಲಿ ಉತ್ತಮ ನ್ಯಾಯದಾನ
ರಾಯಚೂರು: ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದಲ್ಲಿ ನ್ಯಾಯ ಎತ್ತಿ ಹಿಡಿಯುವುದು ಕಷ್ಟವೇನಲ್ಲ ಎಂದು ಇಲ್ಲಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಆರ್.ಜೆ. ಸತೀಶ್ ಸಿಂಗ್ ಹೇಳಿದರು.
ಸ್ಥಳೀಯ ನ್ಯಾಯಾಲಯದ ಸಭಾಂಗಣದಲ್ಲಿ ಮಂಗಳವಾರ ರಾಯಚೂರು ನ್ಯಾಯವಾದಿಗಳ ಸಂಘದಿಂದ ಅವರ ವರ್ಗಾವಣೆ ಹಿನ್ನೆಲೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಕಾಯಕದಲ್ಲಿ ನಿಷ್ಠೆ ಅಗತ್ಯ. ಆಗ ಮಾತ್ರ ಅದರಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.
ನಗರದ ನ್ಯಾಯಾಲಯದಲ್ಲಿ ನ್ಯಾಯವಾದಿಗಳ ಸಂಘದ ಸದಸ್ಯರು, ಸಿಬ್ಬಂದಿ ನಾಗರಿಕರ ಜತೆಗೆ ಉತ್ತಮ ಬಾಂಧವ್ಯ ಹೊಂದಿದ್ದು, ಅದರಿಂದ ನ್ಯಾಯ ದೊರಕಿಸುವ ಕಾರ್ಯದಲ್ಲಿ ಅನುಕೂಲವಾಗುತ್ತದೆ ಎಂದ ಅವರು, ಬಹುತೇಕ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರು ಜನ ಸಂಪರ್ಕವಿರಿಸಿಕೊಂಡಿರುವುದಿಲ್ಲ ಎಂದು ಹೇಳಿದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್. ಭಾನುರಾಜ್ ಮಾತನಾಡಿ, ನ್ಯಾಯಾಧೀಶ ಸತೀಶ್ ಸಿಂಗ್ ಅವರು ಜಿಲ್ಲೆಯ ಹಲವು ವ್ಯಾಜ್ಯಗಳಿಗೆ ತ್ವರಿತ ನ್ಯಾಯ ಒದಗಿಸುವ ಮೂಲಕ ಜನಮಾನಸದಲ್ಲಿ ಹೆಸರು ಗಳಿಸಿದ್ದಾರೆಂದು ಶ್ಲಾಘಿಸಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪಿ.ಜಿ.ಎಂ. ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶ ಚೆಲುವಮೂರ್ತಿ, ಸಂಘದ ಕಾರ್ಯದರ್ಶಿ ಪ್ರಭು ಪಾಟೀಲ್, ಆರತಿ ಇದ್ದರು.
--
ಪ್ರಥಮ ಪಿಯುಸಿ ಪ್ರವೇಶಕ್ಕೆ ಕರೆ
ರಾಯಚೂರು: ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪ್ರವೇಶ ಆರಂಭಗೊಂಡಿದ್ದು, ಆಸಕ್ತರಿಂದ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. ವಿಜ್ಞಾನ ವಿಭಾಗಕ್ಕೆ ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ ವಿಭಾಗ ಹಾಗೂ ನೂತನ ಪ್ರಯೋಗಾಲಯದ ಸೌಲಭ್ಯವಿದೆ. ಕಾಲೇಜಿನಲ್ಲಿ ಮೂಲ ಸೌಕರ್ಯಗಳಿದ್ದು, ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ಶೇ.75ಕ್ಕೂ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಲಾಗುವುದು ಇದರ ಸದುಪಯೋಗಪಡಿಸಿಕೊಳ್ಳಲು ಹಾಗೂ ವಿವರಕ್ಕೆ ಅಮರೇಗೌಡ ಪಾಟೀಲ್ ಮೊ. 99860 83314 ಇಲ್ಲಿಗೆ ಸಂಪರ್ಕಿಸಲು ಕಾಲೇಜಿನ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

