ಹೆಚ್ಚಿದ ಐಪಿಎಲ್ ಬೆಟ್ಟಿಂಗ್, ಮಟ್ಕಾ, ಇಸ್ಪೀಟ್
ಮುದಗಲ್: ದೇಶದಲ್ಲಿ ಐಪಿಎಲ್ ಕ್ರಿಕೆಟ್ ಆರಂಭವಾಗಿದ್ದು, ಬೆಟ್ಟಿಂಗ್ ಹಾವಳಿ ದಿನೇ ದಿನೆ ಹೆಚ್ಚುತ್ತಲೇ ಇದೆ. ಮಟ್ಕಾ, ಇಸ್ಪೀಟ್ ಜೂಜಾಟಕ್ಕಿಂತಲೂ ಹೆಚ್ಚು ಹಣವನ್ನು ಐಪಿಎಲ್ ಬೆಟ್ಟಿಂಗ್‌ಗೆ ತೊಡಗಿಸಲಾಗುತ್ತಿದೆ. ಯುವಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಅಂಗಡಿ ಮುಂಗಟ್ಟುಗಳವರು ಸೇರಿದಂತೆ ಅನೇಕರು ಬೆಟ್ಟಿಂಗ್‌ನಲ್ಲಿ ತೊಡಗಿರುವುದು ಸಾಮಾನ್ಯ.
ಐಪಿಎಲ್ ಟೂರ್ನಾಮೆಂಟ್ ಪ್ರೋತ್ಸಾಹ ನೀಡದೆ ಜೂಜಾಟಕ್ಕೆ ಹೆಚ್ಚಿನ ಉತ್ತೇಜನ ನೀಡಿದಂತಾಗಿದೆ. ಬೆಟ್ಟಿಂಗ್‌ನಲ್ಲಿ ತೊಡಗುವವರಿಗೆ ಯಾವುದೇ ಕಾನೂನು ಭಯ ಇಲ್ಲ. ರಾಜಾರೋಷವಾಗಿ ಬೆಟ್ಟಿಂಗ್ ನಡೆಯುತ್ತಿದ್ದರೂ ಪೊಲೀಸರು ತಮಗೆ ಸಂಬಂಧ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಇದರಿಂದಾಗಿ ಸಾಕಷ್ಟು ಯುವಕರು ಕೆಲಸ ಬಿಟ್ಟು ಟಿವಿ ಮುಂದೆ ಕುಳಿತುಕೊಳ್ಳುತ್ತಾರೆ.
ಐಪಿಎಲ್ ಟೂರ್ನಾಮೆಂಟ್‌ನಿಂದ ವಿದ್ಯಾರ್ಥಿಗಳು ಬೇಸಿಗೆ ಕ್ಲಾಸ್‌ಗಳಿಗೆ ಹೋಗುತ್ತಿಲ್ಲ. ಇದರಿಂದಾಗಿ ಪಾಲಕರು ಈ ಐಪಿಎಲ್ ಯಾವಾಗ ಮುಗಿಯುತ್ತದೆಯೋ ಎಂದು ಶಾಪ ಹಾಕುತ್ತಿದ್ದಾರೆ. ಅನೇಕರು ಬೆಟ್ಟಿಂಗ್‌ನಲ್ಲಿ ಸೋತು ಪ್ರಾಣ ಕಳೆದುಕೊಂಡಿರುವ ಘಟನೆಗಳು ರಾಜ್ಯ ಮತ್ತು ದೇಶದಲ್ಲಿ ನಡೆದಿದ್ದರೂ ಅದಕ್ಕೆ ಕಡಿವಾಣ ಹಾಕುವವರ್ಯಾರು ಇಲ್ಲವೇ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಮಟ್ಕಾ, ಇಸ್ಪೀಟ್ ಜೂಜಾಟದಲ್ಲಿ ತೊಡಗುವವರನ್ನು ಪೊಲೀಸ್ ಇಲಾಖೆ ಗಡಿಪಾರು ಮಾಡಲು ಆದೇಶ ನೀಡುತ್ತಿದೆ. ಆದರೆ ಅದಕ್ಕಿಂತಲೂ ಹೆಚ್ಚಿನ ಜೂಜಾಟ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗುವವರಿಗೇಕೆ ಶಿಕ್ಷೆ ಇಲ್ಲ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

