ಅಕ್ಕಿ ಲೆವಿ ಸಂಗ್ರಹ ನಿಲುಗಡೆ ಚಿಂತನೆ ಸ್ವಾಗತಾರ್ಹ
ಸಿಂಧನೂರು: ಅಕ್ಕಿಲೆವಿ ಸಂಗ್ರಹ ಕೈಬಿಡುವ ಸರ್ಕಾರದ ಚಿಂತನೆ ಸ್ವಾಗತಾರ್ಹವಾಗಿದ್ದು, ಅಕ್ಕಿಗಿರಣಿ ಮಾಲೀಕರು ಅದಕ್ಕೆ ವಿರೋಧ ವ್ಯಕ್ತಪಡಿಸಿರುವುದು ಸರಿಯಾದ ನಿರ್ಧಾರ ಅಲ್ಲ ಎಂದು ರೈತ ಮುಖಂಡ ಹನುಮನಗೌಡ ಬೆಳಗುರ್ಕಿ ಅಭಿಪ್ರಾಯಪಟ್ಟರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಸರ್ಕಾರ ಈ ುವುದು ಉತ್ತಮ ನಿರ್ಣಯ ಎಂದರು.
ಖರೀದಿ ಕೇಂದ್ರಕ್ಕೆ ಆಗ್ರಹ: ಅಕಾಲಿಕ ಮಳೆಯಿಂದ ರೈತರು ಹಲವು ಸ್ವರೂಪದ ನಷ್ಟವನ್ನು ಅನುಭವಿಸಿದ್ದು, ಪುನಾ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬತ್ತದ ಬೆಲೆ ಮಾರುಕಟ್ಟೆಯಲ್ಲಿ 75 ಕೆ.ಜಿ. ತೂಕದ ಭತ್ತಕ್ಕೆ 850ನಿಂದ 950ಕ್ಕೆ ಮಾರಾಟ ನಡೆದಿದೆ. ಇದರಿಂದ ಸ್ವಂತ ಜಮೀನಿರುವ ರೈತರಿಗೆ ಎಕರೆ 6 ಸಾವಿರ, ಗೇಣಿ ರೂಪದ ಜಮೀನಿನಲ್ಲಿ ಬತ್ತ ಬೆಳೆದ ರೈತರಿಗೆ 20 ಸಾವಿರ ನಷ್ಟವಾಗಿದೆ. ಕೇಂದ್ರ ಸರ್ಕಾರ 1350, ರಾಜ್ಯ ಸರ್ಕಾರ 250, ಸೇರಿ 1600 ಬೆಂಬಲ ಬೆಲೆ ನಿಗದಿಪಡಿಸಿದ್ದು, ಇದರಿಂದ ರೈತರಿಗೆ ಸಮರ್ಪಕವಾದ ಬೆಲೆ ಸಿಗುವುದಿಲ್ಲ. ಕೇಂದ್ರ ಸರ್ಕಾರ ಬೆಂಬಲ ಬೆಲೆಯನ್ನು 2000ಕ್ಕೆ ಹೆಚ್ಚಿಸಬೇಕು. ಅಲ್ಲದೆ ಖರೀದಿ ಕೇಂದ್ರದ ನಿಬಂಧನೆಗಳನ್ನು ಸಡಿಲಗೊಳಿಸಿ ಹೋಬಳಿ ಮಟ್ಟದಲ್ಲಿ ರೈತರ ಬತ್ತವನ್ನು ಸರ್ಕಾರವೇ ಖರೀದಿ ಮಾಡಬೇಕೆಂದು ಹನುಮನಗೌಡ ಒತ್ತಾಯಿಸಿದರು.
ಈ ಭಾಗದ ಜನಪ್ರತಿನಿಧಿಗಳು ಪಕ್ಷಭೇದ ಮರೆತು, ಖರೀದಿ ಕೇಂದ್ರ ತೆರೆಯಲು ಸರ್ಕಾರದ ಮೇಲೆ ಒತ್ತಡ ತಂದಿದ್ದು, ಇನ್ನೂ ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ ಎಂದರು.
ಕೃಷಿಕನಿಗೆ ಉತ್ತೇಜನ ನೀಡಲಿ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೃಷಿಗೆ ಉತ್ತೇಜನ ನೀಡುವ ಕಾರ್ಯಕ್ರಮಗಳನ್ನು ಮಾಡುತ್ತಿವೆ. ಆದರೆ ಕೃಷಿಕನಿಗೆ ಉತ್ತೇಜನ ನೀಡುವ ಯೋಜನೆಗಳನ್ನು ಜಾರಿಗೆ ತಂದಿಲ್ಲ. ರೈತರು ಗಣನೀಯವಾದ ನಷ್ಟ ಅನುಭವಿಸುತ್ತಿರುವುದರಿಂದ ಸರ್ಕಾರ ಶೂನ್ಯ ಬಡ್ಡಿಯಲ್ಲಿ ಅಡಮಾನ ಸಾಲ ಕೊಡಬೇಕು. ಕನಿಷ್ಠ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‌ಗೆ 2000 ಘೋಷಣೆ ಮಾಡಬೇಕು. ಕೃಷಿಕ ಉಳಿದರೆ ಮಾತ್ರ ಕೃಷಿ ಉಳಿಯುತ್ತದೆ ಎನ್ನುವ ಸತ್ಯವನ್ನು ಸರ್ಕಾರಗಳು ಅರಿತುಕೊಳ್ಳಬೇಕಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವೆಂಕನಗೌಡ ಗದ್ರಟಗಿ, ಜಿ. ಶರಣೇಗೌಡ ಗೊರೇಬಾಳ, ಕೆ. ಶಾಂತಪ್ಪ ಚಿಂಚರಕಿ,ನಾಗಭೂಷಣ ನವಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

