ಸರ್ಕಾರದ ನಿಯಮಾನುಸಾರ ವಿದ್ಯುತ್ ಪೂರೈಕೆಗೆ ರೈತಸಂಘ ಆಗ್ರಹ
ಲಿಂಗಸ್ಗೂರು: ಸರ್ಕಾರದ ನಿಯಮಾನುಸಾರ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಸಿದ್ದೇಶ ಗೌಡೂರು ಸಹಾಯಕ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಬೇಸಿಗೆ ಹಂಗಾಮಿನಲ್ಲಿ ಶೇಂಗಾ, ಸೂರ್ಯಕಾಂತಿ, ಬತ್ತ, ತರಕಾರಿ ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದು, ಪಂಪ್ಸೆಟ್ಗಳಿಗೆ ಸರಿಯಾದ ಸಮಯಕ್ಕೆ ವಿದ್ಯುತ್ ಪೂರೈಕೆ ಮಾಡದ ಕಾರಣ ಬೆಳೆಗಳಿಗೆ ಸಮರ್ಪಕವಾಗಿ ನೀರು ದೊರೆಯುತ್ತಿಲ್ಲ. ಪಂಪ್ಸೆಟ್ಗಳಿಗೆ ಅನುಗುಣವಾಗಿ ವಿದ್ಯುತ್ ಪರಿವರ್ತಕ ಅಳವಡಿಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ತಾಲೂಕಿನ ಯರಗೋಡಿ ಗ್ರಾಮದ ರೈತರಿಗೆ ವಿದ್ಯುತ್ ಪರಿರ್ವತಕ ಅಳವಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಗಮನಹರಿಸಿಲ್ಲ. ಗೌಡೂರು ಗ್ರಾಮದ 12 ಜನ ರೈತರ ಪಂಪ್ಸೆಟ್ಗಳ ವರ್ಕ್ ಆರ್ಡರ್ ಆಗಿದ್ದು, ಗ್ರಾಮದ ವಿದ್ಯುತ್ ಪರಿವರ್ತಕದಿಂದ ಸಂಪರ್ಕ ನೀಡಲಾಗಿದೆ. ಇದರಿಂದ ಸಮರ್ಪಕ ವಿದ್ಯುತ್ ಪೂರೈಕೆಯಾಗದೆ ಪಂಪ್ಸೆಟ್ಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಕೂಡಲೇ ಕ್ರಮ ಕೈಗೊಳ್ಳುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಎಚ್ಐವಿ ಅರಿವು ಕಾರ್ಯಕ್ರಮ ಯಶಸ್ವಿ
ದೇವದುರ್ಗ: ಎಚ್ಐವಿ ಏಡ್ಸ್ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಈಚೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತಿತರೆ ಇಲಾಖೆಗಳಿಂದ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂತೆ ಪ್ರದೇಶದಲ್ಲಿ ಭಿತ್ತಿಪತ್ರಗಳ ಹಂಚಿಕೆ ಮೂಲಕ ಜನರಲ್ಲಿ ಮಾರಕ ರೋಗದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಜೆಡಿಎಸ್ ರೈತ ಮುಖಂಡ ಜಿ. ಬಸವರಾಜ ನಾಯಕ, ಐಸಿಟಿಸಿ ಮೇಲ್ವಿಚಾರಕ ಮಲ್ಲಯ್ಯ ಮಠಪತಿ ಮಾಹಿತಿ ನೀಡಿದರು. ಯುವ ಮುಖಂಡ ಜಹಿರುದ್ದೀನ್, ಡಾ. ಸುರೇಶ ಗೌಡ, ನಂದಕುಮಾರ, ಜೀವನ್ ಬಿ, ಶಿವಪ್ಪ, ರವಿಕುಮಾರ ಗಾಯಕವಾಡ ಸೇರಿ ಅನೇಕರಿದ್ದರು.
ನಾಳೆ ಉಚಿತ ಶಿಬಿರ
ರಾಯಚೂರು: ಮಾನವಿಯ ಕಲ್ಮಠ ಶ್ರೀವಿರೂಪಾಕ್ಷ ಶಿವಾಚಾರ್ಯ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಿಂದ ಮೇ 27 ರಂದು ಆರೋಗ್ಯದ ಉಚಿತ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಅಂದು ಮೆಡಿಕಲ್ ಕಾಲೇಜಿನಲ್ಲಿ ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ಶಿಬಿರವು ನಡೆಯಲಿದ್ದು, ಮಾನವಿ ಹಾಗೂ ಸುತ್ತಲಿನ ಪ್ರದೇಶದವರು ಶಿಬಿರದಲ್ಲಿ ಪಾಲ್ಗೊಳ್ಳಲು ಕಾಲೇಜಿನ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

