ರಾಯಚೂರು

ಮಠ- ಮಾನ್ಯಗಳು ಜನಪರ ಕೆಲಸ ಮಾಡಲಿ: ಈಶ್ವರಪ್ಪ

Published On :

ಸಿಂಧನೂರು: ಮಠ-ಮಾನ್ಯಗಳು, ದೇವಸ್ಥಾನ ಸಮಿತಿಗಳು ಜನಪರ ಕೆಲಸಗಳನ್ನು ಮಾಡಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
  ತಾಲೂಕಿನ ಸುಂಕನೂರು- ಕಡಬೂರು ಗ್ರಾಮದಲ್ಲಿ ಭಾನುವಾರ ಕಟ್ಟೆಮಲ್ಲಮ್ಮದೇವಿ, ಬೀರಲಿಂಗೇಶ್ವರ, ಅಗ್ಗಿ ಮಹೋತ್ಸವ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಭಾಗದಲ್ಲಿ ದೇವಸ್ಥಾನ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವು ನಿಜಕ್ಕೂ ಉತ್ತಮ ಬೆಳವಣಿಗೆ ಎಂದರು.
  ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ತೊಂದರೆಯಿಂದ ಬಳಲುತ್ತಿವೆ. ಇಂತಹ ಕುಟುಂಬಗಳಿಗೆ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ತುಂಬಾ ಸಹಕಾರಿಯಾಗಿವೆ. ನೂತನ ದಂಪತಿಗಳ ಜೀವನ ಇತರರಿಗೆ ಮಾದರಿಯಾಗಲಿ ಎಂದು ಹಾರೈಸಿದರು. ಕೊಪ್ಪಳ ಸಂಸದ ಕರಡಿ ಸಂಗಣ್ಣ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ರಾಯಚೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸನಗೌಡ ಬ್ಯಾಗವಾಟ್, ಕೃಷ್ಣಾ ಕಾಡಾ ಮಾಜಿ ಅಧ್ಯಕ್ಷ ತಿಮ್ಮನಗೌಡ ಗುಡದೂರು, ಬಿಜೆಪಿ ಮುಖಂಡ ಮಹಾದೇವಪ್ಪಗೌಡ, ಲಿಂಗಣ್ಣ ಪೂಜಾರಿ ಬಳಗಾನೂರು, ಜಿಪಂ ಮಾಜಿ ಉಪಾಧ್ಯಕ್ಷ ಎಂ.ದೊಡ್ಡಬಸವರಾಜ ಸೇರಿದಂತೆ ಇನ್ನಿತರ ಮುಖಂಡರು ನೂತನ ಜೋಡಿಗಳಿಗೆ ಅಕ್ಷತೆ ಹಾಕುವ ಮೂಲಕ ಶುಭ ಹಾರೈಸಿದರು. 75 ಜೋಡಿಗಳ ವಿವಾಹ ನೆರವೇರಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.