ವಿಮಾ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ
ಕ.ಪ್ರ. ವಾರ್ತೆ , ರಾಯಚೂರು , ಮೇ 29
ನಗರದ ಭಾರತೀಯ ಜೀವ ವಿಮಾ ನಿಗಮದ ವಿಮಾ ನೌಕರರ ಸಂಘದಿಂದ ಇತ್ತೀಚೆಗೆ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿ ನವೀನ್ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸಮಾರಂಭದಲ್ಲಿ ಭಾರತೀಯ ಜೀವ ವಿಮಾ ನಿಗಮದ ರಾಯಚೂರು ವಿಭಾಗದ ಡಿವಿಜನಲ್ ಮ್ಯಾನೇಜರ್ ಸಲಾಮತ್ ಅಲಿಖಾನ್(ಐಟಿ) ಮಾತನಾಡಿ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು ಹೆಮ್ಮೆಯ ಸಂಗತಿ ಎಂದರು.
ಭಾರತೀಯ ಜೀವ ವಿಮಾ ನಿಗಮದ ರಾಯಚೂರು ವಿಭಾಗದ ವಿಭಾಗದ ಡಿವಿಜನಲ್ ಮ್ಯಾನೇಜರ್ (ಪಿ ಮತ್ತು ಐಆರ್) ವರಪ್ರಕಾಶ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿಯೂ ಪ್ರತಿಭೆಗಳಿವೆ ಎಂಬುದಕ್ಕೆ ನವೀನ್ ಕುಮಾರ್ ಸಾಕ್ಷಿಯಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಇಂತಹ ಪ್ರತಿಭಾವಂತರಿಗೆ ಎಲ್ಐಸಿಯ ಗೋಲ್ಡ್ ಜುಬಿಲಿ ಫೌಂಡೇಶನ್ನಿಂದ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಸಹಾಯ ಮಾಡುವುದಾಗಿ ಭರವಸೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ವಿಮಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ರವಿ, ಪ್ರತಿಭಾವಂತ ವಿದಾ ್ಯರ್ಥಿಗೆ ಸನ್ಮಾನಿಸುವ ಮೂಲಕ ವಿಮಾ ನೌಕರರ ಸಂಘಟನೆ ಸಾಮಾಜಿಕ ಜವಾಬ್ದಾರಿಯನ್ನು ಪ್ರದರ್ಶಿಸಿದೆ ಎಂದು ಹೇಳಿದರು.
ಈ ಸಂದರ್ಭ ವಿಮಾ ನೌಕರರ ಸಂಘದಿಂದ ವಿದ್ಯಾರ್ಥಿ ನವೀನ್ ಕುಮಾರ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನವೀನ್ಕುಮಾರ್, ಬಡತನವೇ ಬದುಕಿನಲ್ಲಿ ದೊಡ್ಡ ಪಾಠ ಕಲಿಸುತ್ತದೆ. ಅದು ಎಲ್ಲವನ್ನೂ ಸಾಧಿಸುವ ಎದೆಗಾರಿಕೆ ಮೂಡಿಸುತ್ತದೆ ಎಂದ ಅವರು, ವಿದ್ಯೆಯು ಕೇವಲ ಜ್ಞಾನಾರ್ಜನೆಯ ಗುರಿಯಾಗಿರಬೇಕು ಎನ್ನುವ ಆಶಯ ವ್ಯಕ್ತಪಡಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಎಂ.ಶರಣಗೌಡ ವಹಿಸಿದ್ದರು. ವೇದಿಕೆಯಲ್ಲಿ ವಿಮಾ ನೌಕರರ ಸಂಘದ ಉಪಾಧ್ಯಕ್ಷೆ ವಂದನಾ ಬಾಯಿ ಇದ್ದರು. ಕಾರ್ಯಕ್ರಮದಲ್ಲಿ ರಾಯಚೂರು ವಿಭಾಗೀಯ ಕಾರ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಯಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

