ಸಮಸ್ಯೆ ಪರಿಹರಿಸದಿದ್ರೆ ಹೋರಾಟ
ಕ.ಪ್ರ. ವಾರ್ತೆ ್ಣ ಲಿಂಗಸ್ಗೂರು ್ಣ ಮೇ 31
ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಗೆ ಹಾನಿಗೀಡಾದ ಬೆಳೆ ಪರಿಹಾರ ವಿಳಂಬ, ಸರ್ವೆ ಇಲಾಖೆಯಲ್ಲಿನ ಭ್ರಷ್ಟಾಚಾರ ಹಾಗೂ ಸರ್ವೆ ಕಾರ್ಯ ವಿಳಂಬ ಧೋರಣೆ ವಿರೋಧಿಸಿ ಹೋರಾಟ ನಡೆಸುವುದು ಅನಿವಾರ್ಯ ಎಂದು ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಎಚ್ಚರಿಕೆ ನೀಡಿದರು.
ಕಳೆದ ಮಾರ್ಚ್‌ನಲ್ಲಿ ಸುರಿದ ಆಲಿಕಲ್ಲು ಮಳೆಯಿಂದ ಹಾನಿಗೀಡಾದ ಬೆಳೆಗೆ ಬಿಡಿಕಾಸು ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದು, ರೈತರು ಬೆಳೆ ನಷ್ಟ ಸಂಭವಿಸಿದಾಗ ಮುಂದಿನ ಬೆಳೆ ಬೆಳೆಯಲು ಅನುಕೂಲ ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದೆ. ಆದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಹಾಗೂ ಅಧಿಕಾರಿಗಳು ಸರ್ಕಾರದ ಮೇಲೆ ಬೊಟ್ಟು ತೋರಿಸುವ ಕಾರ್ಯ ನಡೆದಿದೆ.
ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಆರಂಭಗೊಂಡಿದ್ದು, ಖಾಸಗಿ ಕಂಪನಿಯವರು ಬಿತ್ತನೆ ಬೀಜ, ಗೊಬ್ಬರ ದಾಸ್ತಾನು ಮಾಡಿಕೊಂಡು ಮಾರಾಟ ಮಾಡಲು ಮುಂದಾಗಿದ್ದು, ಆದರೆ ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನು ಬಂದಿಲ್ಲವೆಂದು ಹೇಳಲಾಗುತ್ತಿದೆ. ಈ ಬಗ್ಗೆ ರೈತರಿಗೆ ಸ್ಪಷ್ಟ ಮಾಹಿತಿ ದೊರೆಯದಂತಾಗಿದೆ ಎಂದು ಹೇಳಿದರು.
ಜನರಿಂದ ಹಣ ವಸೂಲಿ: ಜಿಲ್ಲೆಯ ಎಲ್ಲ ತಾಲೂಕುಗಳ ಸರ್ವೆ ಇಲಾಖೆ ಹಾಗೂ ನೋಂದಣಿ ಇಲಾಖೆಗಳಲ್ಲಿ ಭ್ರಷ್ಟಾಚಾರ ರಾಜಾರೋಷವಾಗಿ ನಡೆದಿದ್ದು, ಸಹಾಯಕ ಆಯುಕ್ತರ ಗಮನಕ್ಕೆ ತಂದಾಗ ವಾರದಲ್ಲಿ ಜನಸಂಪರ್ಕ ಸಭೆ ನಡೆಸಿ 10 ದಿನದಲ್ಲಿ ಸರಿಪಡಿಸುವ ಭರವಸೆ ನೀಡಿದ್ದರು. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಪೋತಿ ವಿರಾಸತ್ ಕಾರ್ಯಕ್ಕೆ ರೈತರು ಗಣಕಯಂತ್ರ ಕೊಠಡಿಗೆ ತೆರಳಿದರೆ ಅಲ್ಲಿನ ಕಂಪ್ಯೂಟರ್ ಆಪರೇಟರ್ ಆದಿಯಾಗಿ ಇಲ್ಲದ ಸಬೂಬು ಹೇಳಿ ಜನರಿಂದ ಹಣ ಪಡೆಯುತ್ತಿದ್ದಾರೆಂದು ದೂರಿದರು.
ಈ ಎಲ್ಲ ಧೋರಣೆಯಿಂದ ಬೇಸತ್ತ ರೈತರು ಸಹನೆ ಕಳೆದುಕೊಂಡಿದ್ದು, ವಾರದಲ್ಲಿ ಸರಿಪಡಿಸದಿದ್ದರೆ ಸಂಘದ ಜಿಲ್ಲಾ ಸಮಿತಿಯಿಂದ ಸಭೆ ಕರೆದು ಆಲಿಕಲ್ಲು ಮಳೆಯಿಂದ ಹಾನಿಗೀಡಾದ ಪರಿಹಾರ ಒದಗಿಸುವುದು, ಸರ್ವೆ ಹಾಗೂ ನೋಂದಣಿ ಇಲಾಖೆಗಳಲ್ಲಿ ನಡೆಯುವ ಭ್ರಷ್ಟಾಚಾರ ತಡೆ ಮತ್ತು ಸರ್ವೆ ಕಾರ್ಯ ವಿಳಂಬ ನೀತಿ ವಿರುದ್ಧ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.
ಕುಪ್ಪಣ್ಣ ಗೋನವಾಟ್ಲ, ತಿಪ್ಪಣ್ಣ ಯಲಗಲದಿನ್ನಿ, ಅಮರಗುಂಡಪ್ಪ, ಕುಪ್ಪಯ್ಯ, ಹನುಮಪ್ಪ, ಮಲ್ಲಿಕಾರ್ಜುನ, ಗಂಗಪ್ಪ, ಗೋಪಾಲ ಸೇರಿದಂತೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

