ಅನುತ್ತೀರ್ಣ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಶಿವಮೊಗ್ಗ: ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಆತ್ಯಹತ್ಯೆ ಮಾಡಿಕೊಂಡ ಘಟನೆ ಗುಡ್ಡೆಕಲ್ಲು ದೇವಾಲಯದ ಬಳಿ ನಡೆದಿದೆ.
ಶಿಕಾರಿಪುರ ತಾಲೂಕಿನ ಅರಶೀಣಗೆರೆ ಗ್ರಾಮದ ಮಂಜಪ್ಪ ಎಂಬುವವರ ಪುತ್ರಿ ಮೇಘನಾ (17) ಮೃತಪಟ್ಟವರು. ಈಕೆ ನಗರ ವಿದ್ಯಾಭಾರತಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ (ವಿಜ್ಞಾನ ವಿಭಾಗ, ಪಿಸಿಎಂಬಿ)ಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣಗೊಂಡಿದ್ದರು. ಈ ಕಾರಣಕ್ಕಾಗಿ ಮನನೊಂದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.
ಅಪಘಾತ: ವ್ಯಕ್ತಿ ಸಾವು
ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.
ಶರಾವತಿ ನಗರದ ನಿವಾಸಿ ಜಗದೀಶ್ ಮೃತ ವ್ಯಕ್ತಿ. ಇವರು ವಿದ್ಯಾನಗರದ ಬಳಿ ಬೈಕ್ನಲ್ಲಿ ವೇಗವಾಗಿ ಬರುವಾಗ ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದರು. ತಕ್ಷಣವೇ ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ಪೂರ್ವ ಸಂಚಾರಿ ಠಾಣೆಯಲ್ಲಿ ದಾಖಲಾಗಿದೆ.
ಜೂಜಾಟ: ಬಂಧನ
ಶಿವಮೊಗ್ಗ: ಕ್ಲಬ್ವೊಂದರಲ್ಲಿ ಜೂಜಾಟದಲ್ಲಿ ತೊಡಗಿದ್ದ 29 ಜನರನ್ನು ಬಂಧಿಸಿದ ಘಟನೆ ನಗರದ ಎನ್.ಟಿ. ರಸ್ತೆಯಲ್ಲಿ ನಡೆದಿದೆ. ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಪೊಲೀಸರು 29 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 28,510 ನಗದು, 20 ಮೊಬೈಲ್, 17 ಏಲೆಕ್ಟ್ರಾನಿಕ್ ಪರದೆಗಳು, 6 ಬೈಕ್, 2 ಆಟೋಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದೊಡ್ಡಪೇಟೆ ಠಾಣೆಯಲ್ಲಿ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

